Publish Date: Wed, 29 Aug 2018 (14:19 IST)
Updated Date: Wed, 29 Aug 2018 (14:22 IST)
ಅಕ್ರಮ ಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಸ್ಥಳದ ಮೇಲೆ ದಾಳಿ ನಡೆಸಿರುವ ಪೊಲೀಸರು ಜೆಸಿಬಿ, ಟಿಪ್ಪರ್ ಗಳನ್ನು ವಶಪಡಿಸಿಕೊಂಡಿದ್ದು, ದಂಧೆಕೋರರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಅಕ್ರಮವಾಗಿ ಕಲ್ಲುಗಣಿಗಾರಿಕೆಯಲ್ಲಿ ತೊಡಗಿದವರ ವಿರುದ್ಧ ಪೊಲೀಸರು ಕಾರ್ಯಾಚರಣೆಗೆ ಇಳಿದಿದ್ದಾರೆ. ಕಲಬುರಗಿಯಲ್ಲಿ ದಾಳಿ ನಡೆಸಿರುವ ಪೊಲೀಸರು ಅಕ್ರಮ ಕಲ್ಲುಗಣಿಗಾರಿಕೆಯಲ್ಲಿ ತೊಡಗಿದ್ದವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಸ್ಥಳದಲ್ಲಿದ್ದ 2 ಜೆಸಿಬಿ, 3 ಹಿಟಾಚಿ, 12 ಟಿಪ್ಪರ್ ಹಾಗೂ ಇತರ ವಾಹನಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ.
ಗುಲ್ಬರ್ಗಾ ವಿಶ್ವವಿದ್ಯಾಲಯ ಆವರಣದಲ್ಲಿರುವ ಪಾಲಿ ವಿಶ್ವವಿದ್ಯಾಲಯದ ಹಿಂಭಾಗದಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿತ್ತು. ಕುಸನೂರು ರಸ್ತೆಯ ಪಕ್ಕದ ಗುಡ್ಡದಲ್ಲಿ ಪೊಲೀಸರು ದಾಳಿ ನಡೆಸಿದ್ದಾರೆ.