Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಚಿತ್ರದುರ್ಗ: ಶೌಚಾಲಯದ ಸೀಕ್ರೆಟ್ ರೂಂನಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪಿಗಳನ್ನು ಬಂಧಿಸಲಾಗಿದೆ.
ಹೂಳಲ್ಕೆರೆಯ ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ನಡೆಸಿದ ಪೊಲೀಸರು ಓರ್ವ ಯುವತಿಯನ್ನು ರಕ್ಷಿಸಿದ್ದಾರೆ. ಹೊರ ರಾಜ್ಯದಿಂದ ಯುವತಿಯರನ್ನು ಕರೆತಂದು ವೇಶ್ಯಾವಾಟಿಕೆ ನಡೆಸಲಾಗುತ್ತಿತ್ತು.
ಈ ಬಗ್ಗೆ ಸಂಸ್ಥೆಯೊಂದು ದೂರು ನೀಡಿತ್ತು. ಅದರಂತೆ ದಾಳಿ ನಡೆಸಿದಾಗ ಶೌಚಾಲಯಕ್ಕೆ ಗೌಪ್ಯ ಬಾಗಿಲು ನಿರ್ಮಿಸಿ ಅದರೊಳಗೆ ದಂಧೆ ನಡೆಯುತ್ತಿದ್ದುದು ಬೆಳಕಿಗೆ ಬಂದಿದೆ.