Publish Date: Sun, 04 Nov 2018 (09:45 IST)
Updated Date: Sun, 04 Nov 2018 (09:47 IST)
ಬೆಂಗಳೂರು: ನಟಿ ಶೃತಿ ಹರಿಹರನ್ ರ ಮೀ ಟೂ ಆರೋಪಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಬಹುಭಾಷಾ ತಾರೆ ಅರ್ಜುನ್ ಸರ್ಜಾಗೆ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ಪೊಲೀಸರು ನೋಟಿಸ್ ನೀಡಿದ್ದಾರೆ.
ಶೃತಿ ಹರಿಹರನ್ ನೀಡಿದ ದೂರಿನ ಅನ್ವಯ ಈಗಾಗಲೇ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ವಿಸ್ಮಯ ಚಿತ್ರದ ನಿರ್ದೇಶಕ ಅರುಣ್ ವೈದ್ಯನಾಥನ್ ಸೇರಿದಂತೆ ಐವರು ಸಾಕ್ಷಿಗಳ ವಿಚಾರಣೆ ನಡೆಸಿದ್ದಾರೆ.
ಇದೀಗ ಆರೋಪಿ ಸ್ಥಾನದಲ್ಲಿರುವ ನಟ ಅರ್ಜುನ್ ಸರ್ಜಾಗೆ ಸೋಮವಾರ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.