ಪೊಲೀಸ್ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಇಲಾಖೆಗೆ ಕಪ್ಪುಚುಕ್ಕೆ ಬಾರದಂತೆ ಕೆಲಸ ಮಾಡಬೇಕು.
ಹೀಗಂತ ಗೃಹ ಸಚಿವರಾದ ಬಸವರಾಜ ಬೊಮ್ಮಾಯಿ ಸೂಚನೆ ನೀಡಿದ್ದಾರೆ.
ಪೊಲೀಸ್ ಠಾಣೆಗೆ ಶ್ರೀಮಂತರು, ಬಡವರು, ಅನಕ್ಷರಸ್ಥರು ಹೀಗೆ ಎಲ್ಲರೂ ಬರುತ್ತಾರೆ. ಸಿವಿಲ್ ಪ್ರಕರಣಗಳಲ್ಲಿ ಹೆಚ್ಚಾಗಿ ಸೆಟ್ಲಮೆಂಟ್ ಆಗುತ್ತವೆ. ಇಂತಹ ಪ್ರಕರಣಗಳಲ್ಲಿ ಪೊಲೀಸರು ಮಧ್ಯಸ್ಥಿಕೆ ಏಜೆಂಟ್‍ಗಳು ಆಗಬಾರದು. ಬಡವರಿಗೆ ನ್ಯಾಯ ಕೊಡುವ ಕೆಲಸ ಮಾಡಬೇಕು.
ಸಿವಿಲ್ ಪ್ರಕರಣಗಳನ್ನು ನ್ಯಾಯಾಲಯದ ಮೂಲಕ ಇತ್ಯರ್ಥ ಮಾಡಿಕೊಳ್ಳಬೇಕಷ್ಟೆ, ಆದರೆ ಇಲಾಖೆ ಅಧಿಕಾರಿಗಳು ಇದರಲ್ಲಿ ಭಾಗಿಯಾಗಬಾರದು. ಈಗಾಗಲೇ ಇಂತಹ ಕರ್ತವ್ಯ ಲೋಪ ಎಸಗಿದ ಹಲವಾರು ಪೊಲೀಸರ ಮೇಲೆ ಕ್ರಮ ಜರುಗಿಸಲಾಗಿದೆ ಎಂದಿದ್ದಾರೆ.