ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ರಾಜಕೀಯ ಪಕ್ಷಗಳು ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರವನ್ನು ದಾಳ ಪ್ರತಿ ದಾಳವಾಗಿ ಮಾಡುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ.
ಲಿಂಗಾಯ-ವೀರಶೈವ ಪ್ರತ್ಯೇಕ ಧರ್ಮ ವಿಚಾರದ ಬಗ್ಗೆ ಈಗಾಗಲೇ ಸಿಎಂ ಸಿದ್ಧರಾಮಯ್ಯಗೆ ಎರಡು ಬಾರಿ ಮನವಿ ಸಲ್ಲಿಸಲಾಗಿದೆ ಎಂದು ಸಚಿವ ಎಸ್ ಆರ್ ಪಾಟೀಲ್ ಹೇಳಿದ್ದಾರೆ. ಸಿಎಂ ಈ ವಿಚಾರ ಪರಿಶೀಲಿಸಿದ ಮೇಲೆ ಕೇಂದ್ರಕ್ಕೆ ಪ್ರಸ್ತಾವನೆ ಕಳುಹಿಸುತ್ತಾರೆ ಎಂದು ಅವರು ಹೇಳಿದ್ದಾರೆ.
ಅಲ್ಲದೆ, ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಮತ್ತು ಪೇಜಾವರ ಶ್ರೀಗಳು ಪ್ರತ್ಯೇಕ ಧರ್ಮ ವಿಚಾರದಲ್ಲಿ ಮೂಗು ತೂರಿಸುವುದು ಬೇಡ ಎಂದು ಟಾಂಗ್ ಕೊಟ್ಟಿದ್ದಾರೆ. ಇನ್ನೊಂದೆಡೆ ಬಿಜೆಪಿ ನಾಯಕರು ಲಿಂಗಾಯತ ಮತ್ತು ವೀರಶೈವ ನಾಯಕರನ್ನು ಒಗ್ಗೂಡಿಸುವ ಪ್ರಯತ್ನದಲ್ಲಿದ್ದಾರೆ. ಪ್ರತ್ಯೇಕ ಧರ್ಮವಾದರೆ ಮುಂಬರುವ ಚುನಾವಣೆ ಸಂದರ್ಭದಲ್ಲಿ ಕಷ್ಟವಾಗಲಿದೆ ಎಂಬುದು ಬಿಜೆಪಿ ಲೆಕ್ಕಾಚಾರವಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ