ಹೆಚ್ಚೆಚ್ಚು ಸಮಸ್ಯೆಗಳನ್ನು ಸೃಷ್ಟಿಸುತ್ತಿರುವವರೇ ರಾಜಕಾರಣಿಗಳು. ಮೊದಲು ತಮ್ಮನ್ನು ತಾವು ತಿದ್ದಿಕೊಳ್ಳಲಿ ಎಂದು ರಾಜಕಾರಣಿಗಳ ಕಾರ್ಯವೈಖರಿ ಕುರಿತು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಬೇಸರ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ ಕುಸಿದಿದೆ. ರಾಜಧಾನಿ ಬೆಂಗಳೂರಿನಲ್ಲಿ ಸಮಸ್ಯೆಗಳು ತುಂಬಿ ತುಳುಕುತ್ತಿವೆ. ಕೂಡಿಯುವ ನೀರಿನ ಸಮಸ್ಯೆ ತಲೆದೂರಿದೆ. ಆದರೂ ಸರಕಾರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದರು.
ಬೆಂಗಳೂರಿನಲ್ಲಿ ಟ್ರಾಪಿಕ್ ಸಮಸ್ಯೆ ನಿಜಕ್ಕೂ ಆತಂಕ ತಂದಿದೆ. ಹಿಂದಿನ ಬೆಂಗಳೂರೇ ಬೇರೆ, ಇಗೀನ ಬೆಂಗಳೂರೇ ಬೇರೆಯಾಗಿದೆ ಎಂದು ಅಭಿಪ್ರಾಯಪಟ್ಟರು.
ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಸುಪ್ರೀಂಕೋರ್ಟ್ ನೀಡಿರುವ ತೀರ್ಪಿಗೆ ಬೇಸರ ವ್ಯಕ್ತಪಡಿಸಿದ ಅವರು, ಕಾವೇರಿ ಜಲಾನಯನ ಪ್ರದೇಶದಲ್ಲಿ ನೀರು ಇದೆಯೋ ಇಲ್ಲವೋ ಎನ್ನುವುದನ್ನು ಅರಿತು ನ್ಯಾಯಾಲಯ ತೀರ್ಪು ನೀಡಬೇಕಿತ್ತು ಎಂದು ಹೇಳಿದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ