Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಮತದಾನ ಬಹಿಷ್ಕರಿಸಿ ಘರ್ಷಣೆ: ಇಂಡಿಗನತ್ತ ಗ್ರಾಮದಲ್ಲಿ ಏ.29 ರಂದು ಮರು ಮತದಾನ

ಮತದಾನ ಬಹಿಷ್ಕರಿಸಿ ಘರ್ಷಣೆ: ಇಂಡಿಗನತ್ತ ಗ್ರಾಮದಲ್ಲಿ ಏ.29 ರಂದು ಮರು ಮತದಾನ

Sampriya

ಚಾಮರಾಜನಗರ , ಶನಿವಾರ, 27 ಏಪ್ರಿಲ್ 2024 (17:11 IST)
Photo Courtesy X
ಚಾಮರಾಜನಗರ: ಮತದಾನ ಬಹಿಷ್ಕಾರಿಸಿ ನಡೆದ ಘರ್ಷಣೆಯಿಂದಾಗಿ ಮತದಾನ ರದ್ದಾದ  ಹನೂರು ತಾಲ್ಲೂಕಿನ ಇಂಡಿಗನತ್ತ ಗ್ರಾಮದಲ್ಲಿ ಸೋಮವಾರ (ಏ.29) ಮರು ಮತದಾನ ನಡೆಸಲು ಚುನಾವಣಾ ಆಯೋಗ ತೀರ್ಮಾನಿಸಿದೆ.

ಬೆಳಿಗ್ಗೆ 7ರಿಂದ ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ.  ಈ ಮತಗಟ್ಟೆ ವ್ಯಾಪ್ತಿಯಲ್ಲಿ 528 ಮತದಾರರಿದ್ದಾರೆ. ಶುಕ್ರವಾರ ಇಲ್ಲಿ ಒಂಬತ್ತು ಮಂದಿಯಷ್ಟೇ ಮತದಾನ ಮಾಡಿದ್ದರು.  

ಇನ್ನೂ ಮತದಾನ ಬಹಿಷ್ಕಾರದ ವಿಚಾರದಲ್ಲಿ ಇಂಡಿಗನತ್ತ, ಮೆಂದಾರೆ ಗ್ರಾಮಸ್ಥರು ಹಾಗೂ ಪೊಲೀಸರ ನಡುವೆ ಉಂಟಾದ ಘರ್ಷಣೆ ಸಂದರ್ಭದಲ್ಲಿ ಉದ್ರಿಕ್ತರು, ಇಂಡಿಗನತ್ತ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ತೆರೆಯಲಾಗಿದ್ದ ಮತಗಟ್ಟೆಯ ಮೇಲೆ ಕಲ್ಲು ತೂರಾಟ ನಡೆಸಿದ್ದರು. ಮಾತ್ರವಲ್ಲದೇ ಒಳಗ್ಗೆ ನುಗ್ಗಿ ಇನ್ನಿತರ ಪರಿಕರಗಳನ್ನು ಕೆಳಕ್ಕೆ ಎಸೆದು ಹಾನಿ ಮಾಡಿ, ಇವಿಎಂಗೆ ಬೆಂಕಿ ಹಚ್ಚಲೂ ಯತ್ನಿಸಿದ್ದರು.

ಘಟನೆಗೆ ಸಂಬಂಧಿಸಿದಂತೆ ಜಿಲ್ಲಾ ಚುನಾವಣಾಧಿಕಾರಿ ಸಿ.ಟಿ. ಶಿಲ್ಪಾ ನಾಗ್‌ ಹಾಗೂ ಸಾಮಾನ್ಯ ವೀಕ್ಷಕ ಪಾರ್ಥ ಗುಪ್ತ ಅವರು ಚುನಾವಣಾ ಆಯೋಗಕ್ಕೆ ವರದಿ ಸಲ್ಲಿಸಿದ್ದರು.

ಈ ವರದಿಯ ಆಧಾರದಲ್ಲಿ ಪ್ರಜಾ ಪ್ರಾತಿನಿಧ್ಯ ಕಾಯ್ದೆಯ ಸೆಕ್ಷನ್‌ 58 (2) ಮತ್ತು 58 ಎ(2) ಅಡಿಯಲ್ಲಿ ಮರು ಮತದಾನ ನಡೆಸಲು ತೀರ್ಮಾನಿಸಲಾಗಿದೆ ಎಂದು ಚುನಾವಣಾ ಆಯೋಗವು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಯವರಿಗೆ ಬರೆದಿರುವ ಪತ್ರದಲ್ಲಿ ತಿಳಿಸಿದೆ.



Share this Story:

Follow Webdunia kannada

ಮುಂದಿನ ಸುದ್ದಿ

ಮೊದಲ ಹಂತದ ಚುನಾವಣೆಯಲ್ಲಿ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ: ಸಿಎಂ ಸಿದ್ದರಾಮಯ್ಯ