Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಐದು ವರ್ಷಗಳ ಅವಧಿಗೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯನ್ನು ನಿಷೇಧಿಸಿ ಕೇಂದ್ರ ಗೃಹ ಸಚಿವಾಲಯ ಆದೇಶ ಹೊರಡಿಸಿದ್ದು, ಈ ಹಿನ್ನೆಲೆಯಲ್ಲಿ ಬೆಂಗಳೂರು ನಗರ ಸೇರಿದಂತೆ ರಾಜ್ಯಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ.
ಬೆನ್ಸನ್ ಟೌನ್ನಲ್ಲಿರುವ ಪಿಎಫ್ಐ ಪ್ರಧಾನ ಕಚೇರಿ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಕಚೇರಿ ಸಮೀಪ ಯಾರಿಗೂ ಗುಂಪುಗೂಡಲು ಪೊಲೀಸರು ಅವಕಾಶ ನೀಡುತ್ತಿಲ್ಲ.
ಇನ್ನು ಸೂಕ್ಷ್ಮ ಪ್ರದೇಶಗಳಲ್ಲಿ ಬಂದೋಬಸ್ತ್ ಹೆಚ್ಚಿಸಲು ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್ ಸೂಚನೆ ನೀಡಿದ್ದಾರೆ.