ರಾಯಚೂರು : ಶಕ್ತಿನಗರದಲ್ಲಿರುವ ರಾಯಚೂರು ಶಾಖೋತ್ಪನ್ನ ವಿದ್ಯುತ್ ಸ್ಥಾವರದ ಮೂರು ಘಟಕಗಳು ಸ್ಥಗಿತಗೊಂಡಿದ್ದು ವಿದ್ಯುತ್ ಉತ್ಪಾದನೆಯಲ್ಲಿ ಭಾರೀ ಪ್ರಮಾಣದ ಇಳಿಕೆಯಾಗಿದೆ.
ತಾಂತ್ರಿಕ ಸಮಸ್ಯೆಯಿಂದ 1, 2 ಹಾಗೂ ಮೂರನೇ ಘಟಕಗಳಲ್ಲಿ ವಿದ್ಯುತ್ ಉತ್ಪಾದನೆ ಸ್ಥಗಿತಗೊಂಡಿದೆ. 1720 ಮೆಗಾ ವ್ಯಾಟ್ ಸಾಮರ್ಥ್ಯದ ಬೃಹತ್ ವಿದ್ಯುತ್ ಕೇಂದ್ರದಲ್ಲಿ ಸದ್ಯ 5 ಘಟಕಗಳಿಂದ ಕೇವಲ 678 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನೆಯಾಗುತ್ತಿದೆ.
ಹಾರೋ ಬೂದಿ ಸಾಗಣೆ ಬಂಕ್ಲರ್ ಕುಸಿದು ಬಿದ್ದ ಹಿನ್ನೆಲೆ ಕಳೆದ 11 ತಿಂಗಳಿನಿಂದ ಒಂದನೇ ಘಟಕ ದುರಸ್ತಿಯಲ್ಲಿದೆ. ಇತ್ತೀಚಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಆರ್ಟಿಪಿಎಸ್ ಗೆ ಭೇಟಿ ನೀಡಿ ಸಮಸ್ಯೆಗಳ ಬಗ್ಗೆ ಗಮನಹರಿಸುವುದಾಗಿ ಹೇಳಿದ್ದರು. ಆದರೆ ಇಂಧನ ಸಚಿವರ ಭೇಟಿ ಬಳಿಕವೂ ತಾಂತ್ರಿಕ ಸಮಸ್ಯೆಗಳು ಬಗೆಹರಿದಿಲ್ಲ.