ರಾಜ್ಯ ಸರಕಾರದ ಪ್ರಭಾವಿ ರಾಜಕಾರಣಿಯೊಬ್ಬರು ಭ್ರಷ್ಟ ಅಧಿಕಾರಿ ಚಿಕ್ಕರಾಯಪ್ಪನಿಗೆ ಆಶ್ರಯ ನೀಡಿದ್ದಾರೆ ಎಂದು ಹೇಳಲಾಗುತ್ತಿದೆ.
ಮೈಸೂರಿನಲ್ಲಿ ಪ್ರಭಾವಿ ರಾಜಕಾರಣಿಯೊಬ್ಬರಿಗೆ ಸೇರಿದ ಫಾರ್ಮ್‌ಹೌಸ್‌ನಲ್ಲಿ ಭ್ರಷ್ಟ ಅಧಕಾರಿ ಚಿಕ್ಕರಾಯಪ್ಪ ಆಶ್ರಯ ಪಡೆದಿದ್ದಾನೆ ಎಂದು ಶಂಕೆಗಳು ಉಂಟಾಗುತ್ತಿವೆ. ಈ ಕುರಿತು ಇಡಿ ಅಧಿಕಾರಿಗಳಿಗೆ ಮಾಹಿತಿ ಲಭ್ಯವಾಗಿದ್ದು, ಇಡಿ ಅಧಿಕಾರಿಗಳು ಶೋಧ ಕಾರ್ಯವನ್ನು ಚುರುಕುಗೊಳಿಸಿದ್ದಾರೆ.
ಬೃಹತ್ ಭ್ರಷ್ಟಾಚಾರದ ಆರೋಪ ಎದುರಿಸುತ್ತಿರುವ ಅಧಿಕಾರಿ ಚಿಕ್ಕರಾಯಪ್ಪ, ಕಳೆದ ಒಂದು ತಿಂಗಳಿನಿಂದ ನಾಪತ್ತೆಯಾಗಿದ್ದಾನೆ. ಇತನ ವಿರುದ್ಧ ಲುಕ್‌ಔಟ್ ನೋಟಿಸ್ ಜಾರಿಯಾಗಿದ್ದರೂ ಸಹ ಆರೋಪಿ ತಲೆಮರೆಸಿಕೊಂಡಿದ್ದಾನೆ.
ಇಬ್ಬರು ಭ್ರಷ್ಟ ಅಧಿಕಾರಿಗಳ ಮನೆಯಲ್ಲಿ ಕೋಟಿ ಕೋಟಿ ಹಣ, ಚಿನ್ನದ ಗಟ್ಟಿ, ಬೇನಾಮಿ ಆಸ್ತಿ ಸೇರಿದಂತೆ ಒಟ್ಟು 152 ಕೋಟಿ ರೂಪಾಯಿ ಮೌಲ್ಯದ ಸಂಪತ್ತು ಪತ್ತೆಯಾದ ಹಿನ್ನೆಲೆಯಲ್ಲಿ ಅವರನ್ನು ಸಸ್ಪೆಂಡ್ ಮಾಡಲಾಗಿತ್ತು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ