Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಎಸ್ ಐಟಿ ನೋಟಿಸ್ ಬೆನ್ನಲ್ಲೇ ಭಾರತಕ್ಕೆ ಮರಳಲು ರೆಡಿಯಾದ ಪ್ರಜ್ವಲ್ ರೇವಣ್ಣ

Prajwal Revanna

Krishnaveni K

ಬೆಂಗಳೂರು , ಬುಧವಾರ, 1 ಮೇ 2024 (14:05 IST)
ಬೆಂಗಳೂರು: ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಕೇಸ್ ಆರೋಪ ಹೊತ್ತಿರುವ ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ವಿದೇಶದಿಂದ ಬರಲು ಸಜ್ಜಾಗಿದ್ದಾರೆ.

ತಮ್ಮ ಮೇಲೆ ಆರೋಪ ಕೇಳಿಬರುತ್ತಿದ್ದಂತೇ ಪ್ರಜ್ವಲ್ ಜರ್ಮನಿಯತ್ತ ಪ್ರಯಾಣ ಬೆಳೆಸಿದ್ದರು. ಪ್ರಜ್ವಲ್ ವಿದೇಶಕ್ಕೆ ತೆರಳಿದ್ದ ಬಗ್ಗೆಯೂ ಸಾಕಷ್ಟು ಟೀಕೆಗಳು ಕೇಳಿಬಂದಿತ್ತು. ಕಾಂಗ್ರೆಸ್ ಮತ್ತು ಬಿಜೆಪಿ ಪ್ರಜ್ವಲ್ ರೇವಣ್ಣನನ್ನು ವಿದೇಶಕ್ಕೆ ಓಡಿ ಹೋಗಲು ಬಿಟ್ಟಿದ್ದು ಯಾರು ಎಂದು ಆರೋಪ ಪ್ರತ್ಯಾರೋಪ ಮಾಡಿದ್ದಾರೆ.

ರಾಜ್ಯ ಸರ್ಕಾರ ಈ ಪ್ರಕರಣದ ತನಿಖೆ ನಡೆಸಲು ಎಸ್ ಐಟಿ ತಂಡ ರಚಿಸಿದೆ. ಇದೀಗ ಎಸ್ ಐಟಿ ಅಧಿಕಾರಿಗಳು ತನಿಖೆ ಆರಂಭಿಸಿದ್ದು ವಿಚಾರಣೆಗೆ ಹಾಜರಾಗಲು ಪ್ರಜ್ವಲ್ ರೇವಣ್ಣ ಮತ್ತು ಎಚ್ ಡಿ ರೇವಣ್ಣಗೆ ನೋಟಿಸ್ ನೀಡಿದ್ದಾರೆ. ಇದರ ಬೆನ್ನಲ್ಲೇ ಪ್ರಜ್ವಲ್ ತವರಿಗೆ ಮರಳಲು ಸಜ್ಜಾಗಿದ್ದಾರೆ.

ಎಸ್ಐಟಿ ವಿಚಾರಣೆಗೆ ಕರೆದಾಗ ಪ್ರಜ್ವಲ್ ಬರಲಿದ್ದಾರೆ ಎಂದು ರೇವಣ್ಣ ಈಗಾಗಲೇ ಹೇಳಿದ್ದರು. ಅದರಂತೆ ಮೇ 3 ರಂದು ಪ್ರಜ್ವಲ್ ಸ್ವದೇಶಕ್ಕೆ ವಾಪಸಾಗಲಿದ್ದಾರೆ. ಅದಾದ ಬಳಿಕ ಎಸ್ಐಟಿ ತಂಡದ ಮುಂದೆ ವಿಚಾರಣೆಗೆ ಹಾಜರಾಗಲಿದ್ದಾರೆ ಎಂದು ತಿಳಿದುಬಂದಿದೆ. ಸದ್ಯಕ್ಕೆ ಎಸ್ಐಟಿ ಅಧಿಕಾರಿಗಳು ವಿಡಿಯೋದಲ್ಲಿರುವ ಮಹಿಳೆಯರನ್ನು ವಿಚಾರಣೆ ನಡೆಸುತ್ತಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ನಾನು ಬದುಕಿರುವವರೆಗೂ ಮುಸ್ಲಿಮರಿಗೆ ಧರ್ಮದ ಆಧಾರದಲ್ಲಿ ಮೀಸಲಾತಿ ಕೊಡಲ್ಲ: ಪ್ರಧಾನಿ ಮೋದಿ