ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ದೇವೇಗೌಡರ ಕುಟುಂಬದಿಂದ ಇಬ್ಬರು ಮಾತ್ರ ಕಣಕ್ಕಿಳಿಯಲಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.
ಮಾಜಿ ಸಚಿವ ಎಚ್.ಡಿ.ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎನ್ನುವುದು ಉಹಾಪೋಹ ವರದಿಗಳು. ಸತ್ಯಾಂಶವೆಂದರೆ ಅವರು ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿಲ್ಲ ಎಂದು ತಿಳಿಸಿದ್ದಾರೆ.
ಕುಮಾರಪರ್ವ ಯಾತ್ರೆ ಅಂಗವಾಗಿ ರಾಜ್ಯದಾದ್ಯಂತ ಪ್ರವಾಸ ಹೊರಟಿರುವ ಕುಮಾರಸ್ವಾಮಿ ಮಾತನಾಡಿ, ವಿಧಾನಸಭೆ ಚುನಾವಣೆಯಲ್ಲಿ ನಾನು ಮತ್ತು ರೇವಣ್ಣ ಸ್ಪರ್ಧಿಸುತ್ತಿದ್ದೇವೆ. ಆದ್ದರಿಂದ, ಗೌಡರ ಕುಟುಂಬದಿಂದ ಮೂರನೇಯವರಿಗೆ ಸ್ಪರ್ಧಿಸಲು ಅವಕಾಶವಿಲ್ಲ ಎಂದರು.
ಬೇಲೂರು ಮತ್ತು ರಾರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರ ಜೆಡಿಎಸ್‌ಗೆ ಪೂರಕವಾಗಿದ್ದರಿಂದ ಪ್ರಜ್ವಲ್ ಚುನಾವಣೆ ಸ್ಪರ್ಧೆಗೆ ದೇವೇಗೌಡರು ಹಸಿರುನಿಶಾನೆ ತೋರಿದ್ದಾರೆ ಎಂದು ಎಚ್.ಡಿ.ರೇವಣ್ಣ ಪತ್ನಿ ಭವಾನಿ ರೇವಣ್ಣ ಹೇಳಿಕೆ ನೀಡಿದ್ದರು. ಆದರೆ, ಭವಾನಿ ಹೇಳಿಕೆಯನ್ನು ತಳ್ಳಿಹಾಕಿದ್ದ ದೇವೇಗೌಡರು, ಪ್ರಜ್ವಲ್‌ಗೆ ಗ್ರೀನ್ ಸಿಗ್ನಲ್ ನೀಡಿಲ್ಲ, ವೈಟ್ ಸಿಗ್ನಲ್ ನೀಡಿಲ್ಲ ಎಂದು ತಳ್ಳಿಹಾಕಿದ್ದರು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.