Select Your Language

Notifications

webdunia
webdunia
webdunia
webdunia

ನಾಮಪತ್ರ ಸಲ್ಲಿಸಿದ ಪ್ರಕಾಶ ಕೋಳಿವಾಡ

ನಾಮಪತ್ರ ಸಲ್ಲಿಸಿದ ಪ್ರಕಾಶ ಕೋಳಿವಾಡ
ಹಾವೇರಿಯ ರಾಣೇಬೆನ್ನೂರು ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಪ್ರಕಾಶ ಕೋಳಿವಾಡ ಇಂದು ನಾಮಪತ್ರ ಸಲ್ಲಿಸಿದ್ದಾರೆ. ಮಾಜಿ ಸ್ಪೀಕರ್ ಕೆಬಿ ಕೋಳಿವಾಡ ಪುತ್ರರಾಗಿರುವ ಪ್ರಕಾಶ ಕೋಳಿವಾಡ ರಾಣೇಬೆನ್ನೂರ ವಿಧಾನ ಸಭಾಕ್ಷೇತ್ರದ ತಾಲೂಕು ಕಚೇರಿಯಲ್ಲಿ ನಾಮಪತ್ರ ಸಲ್ಲಿಸಿದ್ದಾರೆ. ಪ್ರಕಾಶ ಕೋಳಿವಾಡ ಅವರು ನಾಮಪತ್ರ ಸಲ್ಲಿಕೆಗೂ ಮೊದಲು ದೇವಸ್ಥಾನಗಳಿಗೆ ಭೇಟಿ ನೀಡಿದ್ರು. ಸಿದ್ದಿವಿನಾಯಕ ಹಾಗೂ ಶ್ರೀ ಲಕ್ಷ್ಮೀ ವೆಂಕಟೇಶ್ವರ ದೇಗುಲದಲ್ಲಿ ಕುಟುಂಬ ಸಮೇತ ತೆರಳಿ ಪೂಜೆ ಸಲ್ಲಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಅಥಣಿಯಲ್ಲಿ ನನ್ನ ಗೆಲುವು ನಿಶ್ಚಿತ