Publish Date: Sun, 31 Dec 2023 (10:25 IST)
Updated Date: Sun, 31 Dec 2023 (10:25 IST)
ಮೈಸೂರು: ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಸಹೋದರ ವಿಕ್ರಮ್ ಸಿಂಹರನ್ನು ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.
ಅಕ್ರಮವಾಗಿ ಮರ ಕಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಕ್ರಮ್ ಸಿಂಹರನ್ನು ಬಂಧಿಸಲಾಗಿದೆ. ಹಾಸನ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಮರ ಕಡಿದ ಆರೋಪ ವಿಕ್ರಮ್ ಸಿಂಹ ಮೇಲಿದೆ.
ಇತ್ತೀಚೆಗಷ್ಟೇ ಸಂಸದ ಪ್ರತಾಪ್ ಸಿಂಹ ವಿರುದ್ಧ ಸಂಸತ್ ಮೇಲಿನ ದಾಳಿಯ ಆರೋಪಿಗಳಿಗೆ ಪಾಸ್ ವಿತರಿಸಿದ ಆರೋಪ ಹೊರಿಸಲಾಗಿತ್ತು. ಇದಲ್ಲದೆ ಸಿಎಂ ಸಿದ್ದರಾಮಯ್ಯ ಬಗ್ಗೆ ಸೋಮಾರಿ ಸಿದ್ದ ಎಂಬ ಪದ ಬಳಕೆ ಮಾಡಿದ್ದಾರೆ ಎಂದು ಆರೋಪಿಸಿ ಎಫ್ ಐಆರ್ ದಾಖಲಿಸಲಾಗಿತ್ತು.
ಇದೀಗ ಪ್ರತಾಪ್ ಸಿಂಹ ಸಹೋದರನ ಮೇಲೆ ಪ್ರಕರಣ ದಾಖಲಿಸಲಾಗಿದೆ. ಸಹಜವಾಗಿಯೇ ಇದು ರಾಜ್ಯ ಕಾಂಗ್ರೆಸ್ ಸರ್ಕಾರದ ಪಿತೂರಿ ಎಂದು ಪ್ರತಾಪ್ ಸಿಂಹ ಬೆಂಬಲಿಗರು ಆರೋಪಿಸಿದ್ದಾರೆ.