Publish Date: Sun, 11 Sep 2022 (10:54 IST)
Updated Date: Sun, 11 Sep 2022 (00:57 IST)
ಬೆಂಗಳೂರು : ದುಷ್ಕರ್ಮಿಗಳ ಹತ್ಯೆಗೆ ಬಲಿಯಾಗಿದ್ದ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ತಮ್ಮ ಕಚೇರಿಯಲ್ಲಿ ಕೆಲಸ ನೀಡುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.
ದೊಡ್ಡಬಳ್ಳಾಪುರದಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮದ ವೇಳೆ ಸಿಎಂ ಬೊಮ್ಮಾಯಿ ಅವರು ತಮ್ಮ ಭಾಷಣವನ್ನು ಮುಗಿಸಿ ವೇದಿಕೆಯ ಮೇಲೆ ಕುತಿದ್ದರು. ಆಮೇಲೆ ಪುನಃ ಬಂದು ಈ ಘೋಷಣೆಯನ್ನು ಮಾಡಿದ್ದಾರೆ.
ಪ್ರವೀಣ್ ನೆಟ್ಟಾರು ಕುಟುಂಬಕ್ಕೆ ಸರ್ಕಾರದ ನೆರವು ನೀಡುತ್ತೇವೆ. ಪ್ರವೀಣ್ ನೆಟ್ಟಾರು ಅವರು ಬಿಜೆಪಿ ಕಾರ್ಯಕರ್ತ. ಇದರಿಂದಾಗಿ ಕೆಲಸ ಕೊಡುವುದು ನಮ್ಮ ಕರ್ತವ್ಯ. ಸಿಎಂ ಕಚೇರಿಯಲ್ಲೇ ಕೆಲಸ ನೀಡುತ್ತೇನೆ ಎಂದು ಭರವಸೆ ನೀಡಿದರು.