Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಬೆಂಗಳೂರು : ಬಿಜೆಪಿಯ ನಂಬರ್ 2 ನಾಯಕ ಅಮಿತ್ ಶಾ ರಾಜ್ಯ ಭೇಟಿ ಜೆಪಿಯಲ್ಲಿ ಸಂಚಲನ ಮೂಡಿಸಿದ್ದು ಹಲವು ಸುದ್ದಿಗಳಿಗೆ ರೆಕ್ಕೆ ಪುಕ್ಕ ಬಂದಿದೆ.
ಅವಧಿಪೂರ್ವ ಚುನಾವಣೆ, ಸಂಪುಟ ಪುನಾರಚನೆ, ರಾಜ್ಯ ಘಟಕದಲ್ಲಿ ಬದಲಾವಣೆ.. ಹೀಗೆ ಹಲವು ವಿಚಾರಗಳು ಮುನ್ನೆಲೆಗೆ ಬಂದಿದೆ.
ಸಂಜೆ ಅಮಿತ್ ಶಾ ನೇತೃತ್ವದಲ್ಲಿ ಬಿಜೆಪಿ ಕೋರ್ ಕಮಿಟಿ ಸಭೆ ನಡೆದಿದ್ದು, ಚುನಾವಣಾ ತಯಾರಿ ಸೇರಿ ಹಲವು ವಿಚಾರಗಳ ಬಗ್ಗೆ ಗಹನ ಚರ್ಚೆ ನಡೆದಿದೆ.
ಅಮಿತ್ ಶಾ ಪ್ರತಿಯೊಬ್ಬರಿಂದ ಅಭಿಪ್ರಾಯ ಸಂಗ್ರಹ ಮಾಡ್ತಿದ್ದಾರೆ. ಆದರೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮಾತ್ರ, ಸರ್ಕಾರ ಮತ್ತು ಪಕ್ಷದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದಿದ್ದಾರೆ.
ಈಗಾಗಲೇ ವಿರೋಧ ಪಕ್ಷಗಳು ಅವಧಿಪೂರ್ವ ಚುನಾವಣೆ ನಡೆಸಲು ಬಿಜೆಪಿ ಮುಂದಾಗುತ್ತಿದೆ ಎಂದು ಆರೋಪಿಸಿ ಹೇಳಿಕೆ ನೀಡುತ್ತಿವೆ.