Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಕರ್ನಾಟಕದ ಮೂಲೆ ಮೂಲೆಗಳಿಂದ ಅಪ್ಪು ಅಭಿಮಾನಿಗಳು ಪುನೀತ ಪರ್ವ ಕಾರ್ಯಕ್ರಮಕ್ಕೆ ಬರಲಿದ್ದಾರೆ. 5 ಲಕ್ಷಕ್ಕೂ ಅಧಿಕ ಜನರು ಆಗಮಿಸುವ ಸಾಧ್ಯತೆ ಇದೆ. ಪುನೀತ್ ರಾಜ್ಕುಮಾರ್ ಅವರ ಕನಸಿನ ಪ್ರಾಜೆಕ್ಟ್ ಗಂಧದ ಗುಡಿ ಬಿಡುಗಡೆಗೆ ಸಜ್ಜಾಗಿದೆ. ಈ ಸಾಕ್ಷ್ಯಚಿತ್ರವನ್ನು ಅದ್ದೂರಿಯಾಗಿ ಬಿಡುಗಡೆ ಮಾಡಲು ಸಕಲ ಸಿದ್ಧತೆ ನಡೆದಿದೆ. ಇದು ಪುನೀತ್ ರಾಜ್ಕುಮಾರ್ ಅವರ ಕೊನೆಯ ಚಿತ್ರ. ಹಾಗಾಗಿ ಇದನ್ನು ವಿಶೇಷ ರೀತಿಯಲ್ಲಿ ಬರಮಾಡಿಕೊಳ್ಳಲು ಅಪ್ಪು ಅಭಿಮಾನಿಗಳು ಕಾದಿದ್ದಾರೆ. ಅಕ್ಟೋಬರ್ 28ರಂದು ಗಂಧದ ಗುಡಿ ರಿಲೀಸ್ ಆಗಲಿದೆ. ಇದಕ್ಕೆ ಕರ್ನಾಟಕದಲ್ಲಿ ತೆರಿಗೆ ವಿನಾಯಿತಿ ನೀಡಬೇಕು ಎಂದು ಫ್ಯಾನ್ಸ್ ಒತ್ತಾಯಿಸುತ್ತಿದ್ದಾರೆ. ಆ ಮೂಲಕ ಹೆಚ್ಚು ಜನರನ್ನು ಈ ಡಾಕ್ಯುಮೆಂಟರಿ ತಲುಪಲಿ ಎಂಬುದು ಅಭಿಮಾನಿಗಳ ಆಶಯ. ಅದಕ್ಕೂ ಮುನ್ನ ಅಕ್ಟೋಬರ್ 21ರಂದು ಪುನೀತ ಪರ್ವ ಹೆಸರಿನಲ್ಲಿ ಪ್ರೀ-ರಿಲೀಸ್ ಕಾರ್ಯಕ್ರಮ ನಡೆಯಲಿದೆ. ಅದಕ್ಕಾಗಿ ಅಭಿಮಾನಿಗಳು ಭಾರಿ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿರುವ ಪ್ರೀ-ರಿಲೀಸ್ ಕಾರ್ಯಕ್ರಮವನ್ನು ತುಂಬ ಅದ್ದೂರಿಯಾಗಿ ಮಾಡಬೇಕು ಎಂದು ಫ್ಯಾನ್ಸ್ ರೆಡಿ ಆಗಿದ್ದಾರೆ.