Publish Date: Wed, 27 Oct 2021 (18:40 IST)
Updated Date: Wed, 27 Oct 2021 (18:46 IST)
ರಾಜ್ಯದಲ್ಲಿ ನವೆಂಬರ್ 1 ಕನ್ನಡ ರಾಜ್ಯೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಈ ನಡುವಲ್ಲೇ ಹಿಂದೆಂದೂ ನಡೆದಿರದ ಅಭೂತಪೂರ್ವ ಕನ್ನಡ ಉತ್ಸವ ನಡೆಸಲು ಸಕಲ ಸಿದ್ಧತೆಗಳೂ ನಡೆದಿವೆ.ಕನ್ನಡಕ್ಕಾಗಿ ನಾವು ಅಭಿಯಾನದ ಅಂಗವಾಗಿ ನಾಳೆ ಆಯೋಜಿಸಿರುವ ಲಕ್ಷ ಕಂಠಗಳ ಕನ್ನಡ ಗೀತಗಾಯನ ಕಾರ್ಯಕ್ರಮ ಅಸಾಧಾರಣ ರೀತಿಯಲ್ಲಿ ಆಯೋಜಿಸಿ ಯಶಸ್ವಿಗೊಳಿಸಲು ರಾಜ್ಯದ ಎಲ್ಲ 31 ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳ ಜೊತೆ ಚರ್ಚಿಸಿ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ.
geetha
Publish Date: Wed, 27 Oct 2021 (18:40 IST)
Updated Date: Wed, 27 Oct 2021 (18:46 IST)