ಮದುವೆಗೆ ಸಿದ್ಧತೆ, ವಿದ್ಯಾರ್ಥಿನಿ ಆತ್ಮಹತ್ಯೆ

Webdunia
ಭಾನುವಾರ, 15 ಮೇ 2022 (13:45 IST)
ತುಮಕೂರು: ವಿದ್ಯಾರ್ಥಿನಿಯೋರ್ವಳು ಬೆಂಕಿಹಚ್ಚಿಕೊಂಡು  ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕಿನ ಪಳವಳ್ಳಿ ಗ್ರಾಮದಲ್ಲಿ ನಡೆದಿದೆ.
 
ತೇಜಾ (19) ಆತ್ಮಹತ್ಯೆ ಮಾಡಿಕೊಂಡು ವಿದ್ಯಾರ್ಥಿನಿ. ಈಕೆ ಸೀಮೆಎಣ್ಣೆ ಸುರಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಭಾನುವಾರ ಬೆಳಗಿನಜಾವ 4.30ರ ಸುಮಾರಿನಲ್ಲಿ ಘಟನೆ ಸಂಭವಿಸಿದೆ.
 
ತೇಜಾ, ಪಾವಗಡದಲ್ಲಿ ಮೊದಲನೇ ವರ್ಷದ ಬಿಕಾಂ ವಿದ್ಯಾಭ್ಯಾಸ ಮಾಡುತ್ತಿದ್ದಳು. ಇದೇ ಮೇ 24-25 ರಂದು ಮದುವೆ ನಿಶ್ಚಯವಾಗಿತ್ತು‌. ಪೋಷಕರು ಮದುವೆ ಆಮಂತ್ರಣ ಪತ್ರಿಕೆಯನ್ನು ಎಲ್ಲಾ ಕಡೆ ಕೊಟ್ಟಿದ್ದರು‌.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. 
 
ಈಕೆಗೆ ಮದುವೆ ಇಷ್ಟವಿರಲಿಲ್ಲವೋ ಅಥವಾ ಇನ್ನಾವ ಕಾರಣದಿಂದ ಈಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೋ ಎಂಬ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಸ್ಥಳಕ್ಕೆ ಪಾವಗಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡುತ್ತಿದ್ದಾರೆ. ಈ ಬಗ್ಗೆ ಪಾವಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾತ್ರಿ ಡ್ಯೂಟಿಯಲ್ಲಿದ್ದ ಪೊಲೀಸರ ಮೇಲೆ ದಾಳಿ, ಇಬ್ಬರು ಅರೆಸ್ಟ್‌

ನಿಂತಿದ್ದ ಲಾರಿಗೆ ಬೊಲೆರೋ ಡಿಕ್ಕಿ, ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವು

ನಾಳೆ ಸಿದ್ದರಾಮಯ್ಯ ರಾಜೀನಾಮೆ ವದಂತಿ: ಸಿಎಂ ನಿವಾಸದ ಬಳಿ ಶಾಸಕರು, ಸಚಿರ ದೌಡು

ಬಕ್ರೀದ್‌ ಹಬ್ಬ: ಗೋಹತ್ಯೆ, ಅಕ್ರಮ ಮಾಂಸ ಮಾರಾಟ ತಡೆಗೆ ಕಟ್ಟುನಿಟ್ಟಿನ ಕ್ರಮ

ರಾಜ್ಯದಲ್ಲಿ ಎಬೋಲಾ ಪ್ರಕರಣದ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ಸಚಿವ ದಿನೇಶ್ ಗುಂಡೂರಾವ್‌

ಮುಂದಿನ ಸುದ್ದಿ
Show comments