ಜನದಟ್ಟಣೆಯ ಪ್ರದೇಶದಲ್ಲಿ ಚಿಕ್ಕ ಮನೆಗಳಲ್ಲಿ ವಾಸವಿರುವ ಬಡ ಕುಟುಂಬಗಳ ಮಕ್ಕಳ ಶಿಕ್ಷಣಕ್ಕೆ ಅನುಕೂಲವಾಗಲಿ ಎಂಬ ಮಹತ್ವಾಕಾಂಕ್ಷೆಯ ಉದ್ದೇಶದಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸಂಜೆ ಶಾಲೆ ಆರಂಭಿಸಲು ಸಿದ್ಧತೆ ನಡೆಸಿದೆ. ಮೊದಲ ಹಂತದಲ್ಲಿ ಪ್ರಾಯೋಗಿಕವಾಗಿ ದಾಸರಹಳ್ಳಿ ವಲಯದಲ್ಲಿ ಮೊದಲ ಸಂಜೆ ಶಾಲೆ ಪ್ರಾರಂಭಿಸಲು ಮುಂದಾಗಿದ್ದು, ಈ ಕುರಿತು ಅನುಮೋದನೆಗಾಗಿ ಪಾಲಿಕೆ ಶಿಕ್ಷಣ ವಿಭಾಗವು ಮುಖ್ಯ ಆಯುಕ್ತರಿಗೆ ಪ್ರಸ್ತಾವನೆ ಸಲ್ಲಿಸಿದೆ.ಈ ಕುರಿತು ಬಿಬಿಎಂಪಿ ಶಿಕ್ಷಣ ವಿಭಾಗದ ಸಹಾಯಕ ಆಯುಕ್ತ ಉಮೇಶ್ ತಿಳಿಸಿದ್ದಾರೆ.