ಜಿಲ್ಲಾ ಪಂಚಾಯತ ಸಮಾನ್ಯ ಸಭೆಯಲ್ಲಿಯೇ ಅಧ್ಯಕ್ಷೆಯೊಬ್ಬರು ತಮ್ಮ ಸ್ಥಾನಕ್ಕೆ ರಾಜೀನಾಮೆ ಘೋಷಣೆ ಮಾಡಿರುವ ಘಟನೆ ನಡೆದಿದೆ.
ವಿಜಯಪುರದಲ್ಲಿ 11ನೇ ಜಿಲ್ಲಾ ಪಂಚಾಯತ ಸಾಮಾನ್ಯ ಸಭೆ ಆರಂಭಗೊಂಡಿತ್ತು. ಜಿಪಂ ಅಧ್ಯಕ್ಷೆ ನೀಲಮ್ಮ ಮೇಟಿ ನೇತೃತ್ವದಲ್ಲಿ ನಡೆಯುತ್ತಿರುವ ಸಾಮಾನ್ಯ ಸಭೆ ಅದಾಗಿತ್ತು. ವಿಜಯಪುರ ನಗರದ ಜಿಲ್ಲಾ ಪಂಚಾಯತ ಸಾಮಾನ್ಯ ಸಭೆಯಲ್ಲಿ ಅಧ್ಯಕ್ಷೆ ನಿಲ್ಲಮ್ಮಮೇಟಿ ರಾಜೀನಾಮೆ ಘೋಷಣೆ ಮಾಡಿದರು.
ಹೈಕಮಾಂಡ್ ಆದೇಶದಂತೆ ರಾಜೀನಾಮೆ ನಿರ್ಧಾರ ಪ್ರಕಟ ಮಾಡಿದರು.
ಕಾಂಗ್ರೆಸ್ ಪಕ್ಷದಿಂದ ಆಯ್ಕೆಯಾಗಿದ್ದ ನೀಲಮ್ಮ ಮೇಟಿ 30 ತಿಂಗಳ ಅಧಿಕಾರ ಹಂಚಿಕೆ ಸೂತ್ರದಂತೆ ಅಧ್ಯಕ್ಷೆ ಹುದ್ದೆಗೆ ಏರಿದ್ದರು. ಇನ್ನೊಬ್ಬ ಕಾಂಗ್ರೆಸ್ ಸದಸ್ಯ ಶಿವಯೋಗೆಪ್ಪ ನೆದಲಗಿಗೆ ಎರಡನೆಯ ಅವಧಿ ಅಧ್ಯಕ್ಷ ಸ್ಥಾನ ಹಂಚಿಕೆಯಾಗಿತ್ತು.
ಒಟ್ಟು 42 ಸದಸ್ಯರು ಹೊಂದಿದ ವಿಜಯಪುರ ಜಿಲ್ಲಾ ಪಂಚಾಯತ ಸಭೆಯಲ್ಲಿ ಜಿಲ್ಲಾ ಪಂಚಾಯತ ಉಪಾಧ್ಯಕ್ಷ ಮತ್ತು ಸದಸ್ಯರು ಮತ್ತು ಸಿಇಒ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತಿ ಇದ್ದರು.