ಬಿಬಿಎಂಪಿಯ ಜೆಡಿಎಸ್ ಸದಸ್ಯರು ಮೇಯರ್ ಸ್ಥಾನ ಪಡೆಯುವಂತೆ ಒತ್ತಾಯಿಸುತ್ತಿದ್ದಾರೆ ಎಂದು ಮಾಜಿ ಸಿಎಂ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.
ಸಿಎಂ ಸೂಚನೆ ಮೇರೆಗೆ ಗೃಹಸಚಿವ ರಾಮಲಿಂಗಾರೆಡ್ಡಿ ಮತ್ತು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಚರ್ಚೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಅವರೇನು ಚರ್ಚಿಸಿದ್ದಾರೆ ಎನ್ನುವುದು ಗೊತ್ತಿಲ್ಲ. ರಾಮಲಿಂಗಾರೆಡ್ಡಿ ಮತ್ತು ದೇವೇಗೌಡರೊಂದಿಗೆ ಚರ್ಚೆ ನಡೆಸಿದ ನಂತರ ಮೇಯರ್ ಸ್ಥಾನದ ಬಗ್ಗೆ ಸ್ಪಷ್ಟ ನಿರ್ಧಾರ ಹೊರಬೀಳಲಿದೆ ಎಂದು ತಿಳಿಸಿದ್ದಾರೆ.
ರಾಮಲಿಂಗಾರೆಡ್ಡಿ ಮತ್ತು ದೇವೇಗೌಡರೊಂದಿಗೆ ಚರ್ಚಿಸಿದ ನಂತರ ಬಿಬಿಎಂಪಿಯ ಜೆಡಿಎಸ್ ಸದಸ್ಯರೊಂದಿಗೆ ಚರ್ಚೆ ನಡೆಸಿ ಅಂತಿಮ ತೀರ್ಮಾನ ತೆಗೆದುಕೊಳ್ಳುತ್ತೇನೆ ಎಂದರು.
ಬಿಬಿಎಂಪಿಯಲ್ಲಿ ಮೈತ್ರಿ ಮುಂದುವರಿಯಬೇಕಾದಲ್ಲಿ ಜೆಡಿಎಸ್ ಪಕ್ಷಕ್ಕೆ ಮೇಯರ್ ಸ್ಥಾನ ನೀಡಬೇಕು ಎನ್ನುವುದು ಜೆಡಿಎಸ್ ನಾಯಕರ ಒತ್ತಾಯವಾಗಿದೆ. ಕೆಲ ದಿನಗಳಲ್ಲಿ ಮೈತ್ರಿ ಮುಂದುವರಿಯಲಿದೆಯೇ ಬ್ರೆಕ್ ಬೀಳಲಿದೆಯೋ ಕಾದು ನೋಡಬೇಕಾಗಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ
ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.