ಪ್ರಧಾನಿ ನರೇಂದ್ರ ಮೋದಿ ಅವರು ಈ ತಿಂಗಳ 27ರಂದು ಬೆಳಿಗ್ಗೆ 9.30ಕ್ಕೆ ರಾಜ್ಯದ 50 ಲಕ್ಷ ಬಿಜೆಪಿ ಕಾರ್ಯಕರ್ತರೊಂದಿಗೆ ವಚ್ರ್ಯುವಲ್ ಮೂಲಕ ನೇರ ಸಂವಾದ ನಡೆಸಲಿದ್ದಾರೆ ಎಂದು ಬಿಜೆಪಿ ರಾಜ್ಯ ಚುನಾವಣಾ ನಿರ್ವಹಣಾ ಸಮಿತಿ ಸಂಚಾಲಕರು ಹಾಗೂ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದರು.ಮಲ್ಲೇಶ್ವರದ ಬಿಜೆಪಿ ರಾಜ್ಯ ಮಾಧ್ಯಮ ಕೇಂದ್ರದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ 58,112 ಬೂತ್‍ಗಳಲ್ಲಿ, 1,680 ಜಿಲ್ಲಾ ಪಂಚಾಯತ್ ಮಟ್ಟದಲ್ಲಿ ಈ ಸಂವಾದವನ್ನು ಹಮ್ಮಿಕೊಳ್ಳಲಾಗಿದೆ. ಬೂತ್‍ಗಳಲ್ಲಿ ಟಿ.ವಿಗಳನ್ನು, ಜಿಲ್ಲಾ ಪಂಚಾಯತ್ ಮಟ್ಟದಲ್ಲಿ ಎಲ್‍ಇಡಿ ಸ್ಕ್ರೀನ್ ಅಳವಡಿಸಲಾಗುವುದು. ಈ ಸಂವಾದಕ್ಕಾಗಿ ಈಗಾಗಲೇ 24 ಲಕ್ಷ ಕಾರ್ಯಕರ್ತರು ಮೋದಿಆ್ಯಪ್ ಡೌನ್‍ಲೋಡ್ ಮಾಡಿಕೊಂಡಿದ್ದಾರೆ....ಬೂತ್ ಮಟ್ಟದಲ್ಲಿ 58 ಸಾವಿರ ಸ್ಥಳಗಳಲ್ಲಿ ಈ ಆ್ಯಪ್ ಗಳ ಮೂಲಕ ಕಾರ್ಯಕರ್ತರು ಸಂವಾದವನ್ನು ವೀಕ್ಷಿಸಲಿದ್ದಾರೆ. ಎಲ್‍ಇಡಿ ಸ್ಕ್ರೀನ್ ಇರುವ ಕಡೆ ಸುಮಾರು 1,000 ಕಾರ್ಯಕರ್ತರನ್ನು, ಬೂತ್‍ಗಳಲ್ಲಿ 200 ಕಾರ್ಯಕರ್ತರನ್ನು ಈ ಕಾರ್ಯಕ್ರಮಕ್ಕಾಗಿ ಸಂಯೋಜಿಸಲಾಗುವುದು. ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ 5,000 ನಮೋಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಲು ಯೋಜನೆ ರೂಪಿಸಲಾಗಿದೆ. ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳ 15 ಕಡೆ ಪ್ರಧಾನಿಯವರು ಕಾರ್ಯಕರ್ತರ ಪ್ರಶ್ನೆಗಳಿಗೆ ಉತ್ತರಿಸಲಿದ್ದಾರೆ. ಹೊಸ ತಂತ್ರಜ್ಞಾನ ಬಳಸಿಕೊಂಡು ಇದೇ ಮೊದಲ ಬಾರಿ ಬೃಹತ್ ಪ್ರಮಾಣದಲ್ಲಿ ನೇರ ಸಂವಾದ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ