ಕಲಬುರಗಿ : ನಮೋ ಅಂದ್ರೆ ನರೇಂದ್ರ ಮೋದಿಯಲ್ಲ, ನಮಗೆ ಮೋಸ ಮಾಡಿದವರು ಎಂದರ್ಥ ಎಂದು ಸಮಾಜ ಕಲ್ಯಾಣ ಸಚಿವ ಪ್ರಿಯಾಂಕ್ ಖರ್ಗೆ ಪ್ರಧಾನಿ ಮೋದಿಯನ್ನು ಲೇವಡಿ ಮಾಡಿದ್ದಾರೆ.
ಜಿಲ್ಲೆಯ ಚಿಂಚೋಳಿಯಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಮಾತನಾಡಿದ ಸಚಿವರು, ರಾಜ್ಯದಲ್ಲಿ ಬಿಜೆಪಿ ಆಪರೇಶನ್ ಕಮಲಕ್ಕೆ ಕೈಹಾಕಿತ್ತು. ಅದಕ್ಕೆ ಚೋರ್ ಗುರು ಪ್ರಧಾನಿ ಮೋದಿ ಹಾಗೂ ಚಾಂಡಾಳ್ ಶಿಷ್ಯ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಸಾಥ್ ನೀಡಿದ್ದರು. ಮೋದಿ ಚೌಕಿದಾರ್ ನಹೀ, ಚೋರ್ ಹೈ ಚೋರ್ ಎಂದು ಆರೋಪಿಸಿದ್ದಾರೆ.
ಉದ್ಯಮಿಗಳಾದ ಲಲಿತ್ ಮೋದಿ, ನೀರವ್ ಮೋದಿ, ವಿಜಯ್ ಮಲ್ಯ ಸೇರಿದಂತೆ ಅನೇಕರು ಸಾಲ ಮಾಡಿ ದೇಶವನ್ನೇ ಬಿಟ್ಟು ಹೋದರು. ಅವರ ವಿರುದ್ಧ ಕೇಂದ್ರ ಸರ್ಕಾರ ಯಾವುದೇ ಕ್ರಮಕೈಗೊಂಡಿಲ್ಲ ಎಂದು ದೂರಿದ ಅವರು ಹೈದರಾಬಾದ್ ಕರ್ನಾಟಕ ವಿಶೇಷ ಮಿಸಲಾತಿ 371(ಜೆ) ಮಸೂದೆಯನ್ನು ಬಿಜೆಪಿ ತಿರಸ್ಕರಿಸಿತ್ತು. ಆದರೆ ಯುಪಿಎ ಸರ್ಕಾರ ಮಸೂದೆಯನ್ನು ಜಾರಿಗೆ ತಂದು ರಾಜ್ಯದ ಅನೇಕರಿಗೆ ಅನುಕೂಲ ಮಾಡಿಕೊಟ್ಟಿದೆ ಎಂದು ಹೇಳಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.