Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಪ್ರದಾನಿ ಮೋದಿ ಹಸಿರು ಕ್ರಾಂತಿ ಹರಿಕಾರ ಎಂ.ಎಸ್.ಸ್ವಾಮಿನಾಥನ್ ಕುರಿತು ಲೇಖನವನ್ನು ಬರೆದಿದ್ದಾರೆ. ಕೆಲವು ದಿನಗಳ ಹಿಂದಷ್ಟೇ ಪ್ರೊಫೆಸರ್ ಎಂ.ಎಸ್.ಸ್ವಾಮಿನಾಥನ್ ಅವರು ನಮ್ಮನ್ನು ಅಗಲಿದರು. ಕೃಷಿ ವಿಜ್ಞಾನದಲ್ಲಿ ಕ್ರಾಂತಿ ತಂದ ದಾರ್ಶನಿಕರೊಬ್ಬರನ್ನು ನಮ್ಮ ದೇಶವು ಕಳೆದುಕೊಂಡಿತು. ಆದರೂ ಭಾರತಕ್ಕೆ ಅವರ ಕೊಡುಗೆಯು ಸುವರ್ಣಾಕ್ಷರಗಳಲ್ಲಿ ಅಚ್ಚಳಿಯದೆ ಸದಾ ಅಜರಾಮರವಾಗಲಿದೆ. ಪ್ರೊ.ಎಂ.ಎಸ್. ಸ್ವಾಮಿನಾಥನ್ ಅವರು ಭಾರತದ ಬಗ್ಗೆ ಅಪಾರ ಪ್ರೀತಿ ಹೊಂದಿದ್ದರು. ನಮ್ಮ ರಾಷ್ಟ್ರ, ವಿಶೇಷವಾಗಿ ನಮ್ಮ ರೈತರು ಸಮೃದ್ಧಿಯ ಜೀವನವನ್ನು ನಡೆಸಬೇಕೆಂದು ಬಯಸಿ ಬಾರತೀಯ ಕೃಷಿ ಪದ್ದತಿಯಲ್ಲಿ ತಮ್ಮದೇಯಾದ ಛಾಪು ಮೂಡಿಸಿದ್ದಾರೆಂದು ಸುದೀರ್ಘ ಲೇಖನವನ್ನು ಬರೆದಿದ್ದಾರೆ.