ಕಿಕ್ ಬ್ಯಾಕ್ ಪ್ರಕರಣದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹಾಗೂ ಇತರರ ಮೇಲಿನ ಆರೋಪಕ್ಕೆ ಸಂಬಂಧಿಸಿದಂತೆ ಸಿಬಿಐ ವಿಶೇಷ ನ್ಯಾಯಾಲಯ ನೀಡಿರುವ ತೀರ್ಪು ಹಾಸ್ಯಾಸ್ಪದವಾಗಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಬಿ.ಕೆ.ಹರಿಪ್ರಸಾದ್ ವ್ಯಂಗ್ಯವಾಡಿದ್ದಾರೆ.
ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮೋದಿ ಅವರು ಸಿಬಿಐ ಮೇಲೆ ಪ್ರಭಾವ ಬೀರಿ ಬಿ.ಎಸ್.ಯಡಿಯೂರಪ್ಪ ಅವರನ್ನು ನಿರ್ದೋಷಿಯಾಗುವಂತೆ ಮಾಡಿದ್ದಾರೆ. ಕಣ್ಣಿಲ್ಲದ ಕುರುಡನಿಗೂ ಗೊತ್ತು ಬಿಎಸ್‌ವೈ ಅಪರಾಧಿ ಎಂದು. ಆದರೆ, ಪ್ರಧಾನಿ ಅವರ ಒತ್ತಡದಿಂದ ಬಿಎಸ್‌ವೈ ಆರೋಪ ಮುಕ್ತರಾಗುವಂತೆ ಮಾಡಿದೆ ಎಂದು ಆರೋಪಿಸಿದರು.
ಸಿಬಿಐ ಸಂಸ್ಥೆಯನ್ನು ಕಾಂಗ್ರೆಸ್ ಬ್ಯುರೋ ಇನ್ವೆಸ್ಟಿಗೇಷನ್ ಎಂದು ಬಿಜೆಪಿಯವರು ಟೀಕಿಸುತ್ತಿದ್ದರು. ಈಗ ಸಿಬಿಐ ಕರಪ್ಟ್ ಆಂಡ್ ಕಮ್ಯುನಲ್ ಇನ್ವೆಸ್ಟಿಗೇಷನ್ ಸಂಸ್ಥೆಯಾಗಿದೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಬಿ.ಕೆ.ಹರಿಪ್ರಸಾದ್ ಟೀಕಿಸಿದ್ದಾರೆ.
ಕಿಕ್ ಬ್ಯಾಕ್ ಪ್ರಕರಣದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಎಲ್ಲಾ ಆರೋಪಿಗಳು ದೋಷಮುಕ್ತರೆಂದು ಸಿಬಿಐ ವಿಶೇಷ ಕೋರ್ಟ್ ತೀರ್ಪು ನೀಡಿತ್ತು.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ