Publish Date: Mon, 01 May 2023 (21:00 IST)
Updated Date: Mon, 01 May 2023 (20:16 IST)
ಚುನಾವಣೆ ಹೊತ್ತಿನಲ್ಲಿ ರಾಜಕೀಯ ನಾಯಕರ ಟಾಕ್ವಾರ್ ಜೋರಾಗಿದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಳಿಕ ಇದೀಗ ಶಾಸಕ ಪ್ರಿಯಾಂಕ್ ಖರ್ಗೆ ವಿವಾದಾತ್ಮಕ ಹೇಳಿಕೆ ಹರಿಬಿಟ್ಟಿದ್ದಾರೆ. ಕಲಬುರಗಿಯಲ್ಲಿ ಪ್ರಚಾರ ಸಮಯದಲ್ಲಿ ಮಾತನಾಡುತ್ತಾ ಪ್ರಧಾನಿ ನರೇಂದ್ರ ಮೋದಿಯನ್ನು ನಾಲಾಯಕ್ ಎಂದಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಮಳಖೇಡಕ್ಕೆ ಬಂದಾಗ ಏನು ಹೇಳಿದ್ರು? ಬಂಜಾರ ಸಮಾಜದವರಿಗೆ ಏನು ಹೇಳಿದ್ರು? ಬಂಜಾರ ಸಮಾಜದ ಜನರ ಮಗ ದೆಹಲಿಯಲ್ಲಿದ್ದಾನೆ ಅಂತ ಮೋದಿ ಹೇಳಿದ್ದರು. ಆದ್ರೆ ಇಂತಹ ನಾಲಾಯಕ್ ಮಗನಿದ್ರೆ ಹೇಗೆ ನಡೆಯುತ್ತೆ.. ಮನೆಯಲ್ಲಿ ಒಬ್ಬ ನಾಲಾಯಕ್ ಮಗನಿದ್ರೂ ಮನೆ ಸುಸೂತ್ರವಾಗಿ ನಡೆಯೋದಿಲ್ಲ ಎಂದಿದ್ದಾರೆ. ಸುದ್ದಿಗೋಷ್ಠಿಯ ಕೊನೆಯಲ್ಲಿ ನಾನು ಪ್ರಧಾನಿ ಮೋದಿಗೆ ಹಾಗೆ ಅಂದಿಲ್ಲ ಎಂದಿದ್ದಾರೆ