ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಬಂಧನಕ್ಕೆ ಖಂಡನೆ ವ್ಯಕ್ತವಾಗುತ್ತಿದೆ.
ಪ್ರಿಯಾಂಕ ಗಾಂಧಿ ಬಂಧನ ಮಾಡಿರೋ ಕ್ರಮವನ್ನ ಖಂಡಿಸಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯು ಮಂಗಳೂರಲ್ಲಿ ಪಕ್ಷದ ಕಚೇರಿಯ ಎದುರು ಪ್ರತಿಭಟನೆ ನಡೆಸಿತು.
ಈ ವೇಳೆ ಮಾತನಾಡಿದ ಮಾಜಿ ಸಚಿವ ಬಿ.ರಮಾನಾಥ ರೈ, ಉತ್ತರ ಪ್ರದೇಶದ ಸೋನಭದ್ರ ಜಿಲ್ಲೆಯ ಘೋರವಾಲ ಎಂಬಲ್ಲಿ ಆಸ್ತಿ ವಿವಾದದ ಹಿನ್ನೆಲೆಯಲ್ಲಿ ಗಲಭೆ ನಡೆದಿತ್ತು. ಈ ವೇಳೆ ಹತ್ಯೆಗೀಡಾದ ಹತ್ತು ಮಂದಿ ಕುಟುಂಬದ ಸದಸ್ಯರನ್ನು ಭೇಟಿ ಮಾಡಲು ಪ್ರಿಯಾಂಕಾ ಗಾಂಧಿ ತೆರಳಿದ್ರು.
ಅವರನ್ನು ಬಂಧಿಸಿ ಬಿಜೆಪಿ ಸರಕಾರ ಅಧಿಕಾರ ದುರ್ಬಳಕೆ ಮಾಡಿಕೊಂಡಿದೆ. ಅಲ್ಲದೇ ಬಿಜೆಪಿಗರು ಪ್ರಜಾಪ್ರಭುತ್ವವನ್ನು ಅಣಕಿಸುತ್ತಿದ್ದಾರೆ ಎಂದು ಆಪಾದಿಸಿದರು. ಬಿಜೆಪಿ ಹಾಗೂ ಕೇಂದ್ರ ಸರಕಾರದ ವಿರುದ್ಧ ಕೈ ಪಡೆ ಮುಖಂಡರು ಹರಿಹಾಯ್ದರು.