Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳಿಗೆ ಚಳಿ ಬಿಡಿಸಿದ ನ್ಯಾಯಮೂರ್ತಿ ಹೆಚ್.ಪಿ.ಸಂದೇಶ್ ಗೆ ಬೆದರಿಕೆ ಕರೆ ಹಿನ್ನೆಲೆ ಕನ್ನಡ ಪರ ಹೋರಾಟಗಾರ ವಾಟಳ್ ನಾಗರಾಜ್ ಕಪ್ಪು ಬಾವುಟ ಪ್ರದರ್ಶಿಸಿ ನಗರದ ಮೈಸೂರು ಬ್ಯಾಂಕ್ ಸರ್ಕಲ್ ನಲ್ಲಿ ಏಕಾಂಗಿ ಪ್ರತಿಭಟನೆ ನಡೆಸಿದ್ದಾರೆ. ನ್ಯಾಯಮೂರ್ತಿ ಒಬ್ಬರ ಮೇಲೆ ಮತ್ತೊಬ್ಬ ನ್ಯಾಯಮೂರ್ತಿ ಬೆದರಿಕೆ ಹಾಕಿದ್ದಾರೆ ಇದು ಉನ್ನತ ಮಟ್ಟದ ತನಿಖೆಯಾಗಬೇಕು, ಈ ರೀತಿ ಬೆದರಿಕೆ ನ್ಯಾಯಾಂಗ ವ್ಯವಸ್ಥೆಯ ಮೇಲೆ ಕಪ್ಪು ಚುಕ್ಕೆ ಇದ್ದಂತೆ. ಸರ್ಕಾರ ವರ್ಗಾವಣೆ ಬೆದರಿಕೆಯನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ವಾಟಳ್ ನಾಗರಾಜ್ ಆಗ್ರಹಿಸಿದ್ದಾರೆ.