Webdunia - Bharat's app for daily news and videos

Install App

ಶ್ರೀ ಬಲಭೀಮ ದೇವಸ್ಥಾನದಲ್ಲಿ ಸಾರ್ವಜನಿಕ ದರ್ಶನ ನಿಷೇಧ

Webdunia
ಬುಧವಾರ, 10 ಜೂನ್ 2020 (18:15 IST)
ಮೋತಕಪಲ್ಲಿಯ ಶ್ರೀ ಬಲಭೀಮ  ದೇವಸ್ಥಾನದಲ್ಲಿ ಜೂನ್ 22ರವರೆಗೆ ಸಾರ್ವಜನಿಕ ದರ್ಶನವನ್ನು ಜಿಲ್ಲಾಡಳಿತ ನಿಷೇಧಿಸಿದೆ.

ಕಲಬುರಗಿ ಜಿಲ್ಲೆಯಲ್ಲಿ ಕೊರೋನಾ ವೈರಸ್ (ಕೋವಿಡ್-19) ಹರಡವಿಕೆಯನ್ನು ತಡೆಗಟ್ಟಲು   ಹಾಗೂ ದೇವಾಲಯಕ್ಕೆ  ಆಗಮಿಸುವ ಭಕ್ತಾದಿಗಳ ಮತ್ತು ದೇವಾಲಯದ ಸಿಬ್ಬಂದಿಗಳ ಸುರಕ್ಷತೆಯ ದೃಷ್ಟಿಯಿಂದ ಸೇಡಂ ತಾಲೂಕಿನ ಮೋತಕಪಲ್ಲಿಯ ಶ್ರೀ ಬಲಭೀಮ  ದೇವಸ್ಥಾನದಲ್ಲಿ ಜೂನ್ 22ರವರೆಗೆ ಸಾರ್ವಜನಿಕ ದರ್ಶನವನ್ನು ನಿಷೇಧಿಸಲಾಗಿದೆ. ಜಿಲ್ಲಾ ವಿಪತ್ತು ನಿರ್ವಹಣಾ ಸಮಿತಿ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿ ಶರತ್ ಬಿ. ಈ ಆದೇಶ ಹೊರಡಿಸಿದ್ದಾರೆ.

ಜೂ. 22 ರಂದು ಅಮಾವಾಸ್ಯೆ ಇರುವ ಪ್ರಯುಕ್ತ ಸಾವಿರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಈ ದೇವಸ್ಥಾನಕ್ಕೆ ಆಗಮಿಸುವರು. ಅದೇ ರೀತಿ ಕರ್ನಾಟಕ ರಾಜ್ಯ ಸೇರಿದಂತೆ ನೆರೆ ರಾಜ್ಯಗಳಾದ ಮಹಾರಾಷ್ಟ್ರ, ಆಂಧ್ರಪ್ರದೇಶ ಹಾಗೂ ತೆಲಂಗಾಣದಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ದೇವಾಲಯಕ್ಕೆ ಆಗಮಿಸುವರು.

ಇದಲ್ಲದೇ ಈ ದೇವಸ್ಥಾನದ ಅಕ್ಕಪಕ್ಕದ ಗ್ರಾಮಗಳಲ್ಲಿ ಒಟ್ಟು 19 ಕೋರೋನಾ ಸೋಂಕಿತರ ಪ್ರಕರಣಗಳು ಪತ್ತೆಯಾಗಿ ದಾಖಲಾಗಿರುತ್ತದೆ. ವಿಪತ್ತು ನಿರ್ವಹಣಾ ಕಾಯ್ದೆ 2005 ಹಾಗೂ ದಂಡ ಪ್ರಕ್ರಿಯ ಸಂಹಿತೆ 1973 ರ ಕಲಂ 144 ರನ್ವಯ ಜಿಲ್ಲಾಧಿಕಾರಿಗಳು ಈ ಆದೇಶ ಹೊರಡಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments