Publish Date: Fri, 12 Aug 2022 (11:32 IST)
Updated Date: Fri, 12 Aug 2022 (11:35 IST)
ಕೊಪ್ಪಳ : ಗುಂಪು ಘರ್ಷಣೆಗೆ ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ಹುಲಿಹೈದರ್ ಗ್ರಾಮ ಬೆಚ್ಚಿಬಿದ್ದಿದೆ.
ಕ್ಷುಲ್ಲಕ ಕಾರಣಕ್ಕೆ ನಡೆದ ಗುಂಪು ಘರ್ಷಣೆಯಲ್ಲಿ ಯಂಕಪ್ಪ(60) ಮತ್ತು ಭಾಷಾವಲಿ(22) ಮೃತಪಟ್ಟಿದ್ದು, ಧರ್ಮಣ್ಣ ಹರಿಜನ್ ಗಂಭೀರವಾಗಿ ಗಾಯಗೊಂಡು ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ.
ಮುಸ್ಲಿಂ ಸಮುದಾಯದ ಹುಡುಗಿಯರನ್ನು ಎಸ್.ಟಿ ಸಮುದಾಯದವರು ಮದುವೆಯಾಗಿದ್ದಾರೆ ಎಂಬ ವಿಚಾರಕ್ಕೆ ಮಾತಿಗೆ ಮಾತು ಬೆಳೆದು ಗಲಾಟೆ ನಡೆದಿದೆ.
ಸದ್ಯ ಎರಡು ಗುಂಪುಗಳ ನಡುವೆ ನಡೆದ ಗಲಾಟೆಗೆ ಇಡೀ ಗ್ರಾಮವೇ ಬೂದಿ ಮುಚ್ಚಿದ ಕೆಂಡದಂತಿದೆ. ಗ್ರಾಮದಲ್ಲಿ ಆಗಸ್ಟ್ 20ರವರೆಗೂ 144 ಸೆಕ್ಷನ್ ಜಾರಿ ಮಾಡಿದ್ದು, 70ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ.
ಸಿಸಿ ಕ್ಯಾಮೆರಾ ಆಧರಿಸಿ ಈ ಸಂಬಂಧ ಕನಕಗಿರಿ ಠಾಣೆಯಲ್ಲಿ 58 ಮಂದಿ ವಿರುದ್ಧ ದೂರು ದಾಖಲಾಗಿದ್ದು, ಖಾದರಭಾಷಾ ಹಾಗೂ ಹಂಪಮ್ಮ ದೂರು ಪ್ರತಿ ದೂರು ದಾಖಲಿಸಿದ್ದಾರೆ.