ಚಾಮರಾಜನಗರ : ಮದುವೆಯಾಗುವುದಾಗಿ ನಂಬಿಸಿ ಯುವತಿಯ ಜೊತೆ ಲೈಂಗಿಕ ಕ್ರಿಯೆ ನಡೆಸಿ ನಂತರ ಆಕೆಗೆ ವಂಚಿಸಿರುವ ಪ್ರಕರಣವೊಂದು ಗಂಡ್ಲುಪೇಟೆ ತಾಲೂಕಿನ ಬೇಗೂರು ಹೋಬಳಿಯ ಕಮರಹಳ್ಳಿಯಲ್ಲಿ ನಡೆದಿದೆ.
ಆರೋಪಿ ಕಮರಹಳ್ಳಿಯ ಮಹದೇವಪ್ರಸಾದ್ ಎಂಬುದಾಗಿ ತಿಳಿದುಬಂದಿದ್ದು, ಈತ ಯುವತಿಯೊಬ್ಬಳ ಜೊತೆ ಪ್ರೀತಿಯ ನಾಟಕವಾಡಿ ಮದುವೆಯಾಗುವುದಾಗಿ ನಂಬಿಸಿ ಆಕೆಯ ಜೊತೆ ಲೈಂಗಿಕ ಕ್ರಿಯೆ ನಡೆಸಿದ್ದಲ್ಲದೇ, ಆಕೆಯಿಂದ ಬೈಕ್ ಕೂಡ ತೆಗೆಸಿಕೊಂಡು ಈಗ ಮದುವೆಯಾಗಲು ನಿರಾಕರಿಸಿ ವಂಚನೆ ಮಾಡಿದ್ದಾನೆ. ಈ ಬಗ್ಗೆ ಆತನ ಕುಟುಂಬದವರಿಗೆ ತಿಳಿಸಿದಾಗ ಆಕೆಗೆ ಕುಟುಂಬದವರು ಅವಾಚ್ಯ ಪದಗಳಿಂದ ನಿಂದಿಸಿದ್ದಲ್ಲದೆ ಕೊಲೆ ಬೆದರಿಕೆ ಕೂಡ ಹಾಕಿದ್ದಾರೆ.
ಈ ಬಗ್ಗೆ ಯುವತಿ ಇದೀಗ ಗುಂಡ್ಲುಪೇಟೆ ಠಾಣೆಯಲ್ಲಿ ಮಹದೇವಪ್ರಸಾದ್ ಹಾಗೂ ಆತನ ಕುಟುಂಬದವರ ವಿರುದ್ಧ ದೂರು ದಾಖಲಿಸಿದ್ದಾಳೆ.
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ.