Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಬೆಂಗಳೂರಿಗೆ ನನ್ನ ಕೊಡುಗೆ ಸಾಕಷ್ಟು ಇದೆ. ದಾಬಸ್ಪೇಟೆ, ಹೊಸಕೋಟೆಯಲ್ಲಿ ರಿಂಗ್ ರೋಡ್ ಮಾಡಿದ್ದೇನೆ. 7 ಗ್ರಾಮ ಪಂಚಾಯತಿ ಜನರಿಗೆ ಕುಡಿಯುವ ನೀರು, ಸರಿಯಾದ ರಸ್ತೆ ಇರಲಿಲ್ಲ. ಅದನ್ನ ಬಿಬಿಎಂಪಿಗೆ ಸೇರಿಸಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿದ್ದೆ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹೇಳಿದರು. ಬೆಂಗಳೂರಿನ JDS ಕಚೇರಿ ಜೆ.ಪಿ.ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ನಾಳೆಯಿಂದ ಮೇ 8ರವರೆಗೆ 62 ಕಡೆ ತಾತ್ಕಾಲಿಕ ಕಾರ್ಯಕ್ರಮ ನಿಗದಿಯಾಗಿದ್ದು, ವಾರದಲ್ಲಿ ಒಂದು ದಿನ ಆರೋಗ್ಯದ ಕಾರಣ ವಿಶ್ರಾಂತಿಗೆ ವೈದ್ಯರು ಸೂಚಿಸಿದ್ದಾರೆ ಎಂದರು. ಇನ್ನು ಇದೇ ಸಂದರ್ಭದಲ್ಲಿ ಜೆಡಿಎಸ್ ನಾಯಕರ ವಿರುದ್ಧ ಸಂಸದೆ ಸುಮಲತಾ ಟೀಕೆ ವಿಚಾರ ದೊಡ್ಡವರ ಹೆಸರು ಪ್ರಸ್ತಾಪಿಸಿ ಯಾವುದೇ ಗೊಂದಲಕ್ಕೀಡಾಗಲ್ಲ. ಯಾರು ಏನು ಹೇಳಿದರು, ಅದಕ್ಕೂ ನನಗೂ ಸಂಬಂಧವಿಲ್ಲ. ಎಲ್ಲರಿಗೂ ಅಭಿವ್ಯಕ್ತಿ ಸ್ವಾತಂತ್ರ್ಯವಿದೆ ಮಾತನಾಡಲಿ ಎನ್ನುವ ಮೂಲಕ ಸುಮಲತಾ ವಿರುದ್ದ ಕಿಡಿಕಾರಿದ್ರು