Publish Date: Fri, 14 Apr 2023 (16:10 IST)
Updated Date: Fri, 14 Apr 2023 (15:58 IST)
ಇಂದಿನಿಂದ ವರುಣಾದಲ್ಲಿ ಪ್ರಚಾರ ಆರಂಭಿಸಿದ್ದೇವೆ, ವರುಣಾವನ್ನ ಮತ್ತೊಂದು ಗೋವಿಂದರಾಜ ನಗರ ಮಾಡುವ ಗುರಿ ಹೊಂದಿದ್ದೇನೆ ಎಂದು ವಸತಿ ಸಚಿವ ಸೋಮಣ್ಣ ಹೇಳಿದ್ದಾರೆ.. ಮೈಸೂರಿನಲ್ಲಿ ಮಾತನಾಡಿದ ಅವರು, ವರುಣಾ ಪ್ರಚಾರಕ್ಕೆ ಮಾಜಿ ಸಿಎಂ ಯಡಿಯೂರಪ್ಪ, ಸಿಎಂ ಬಸವರಾಜ ಬೊಮ್ಮಾಯಿ, MLC ಛಲವಾದಿ ನಾರಾಯಣಸ್ವಾಮಿ ಬರಲಿದ್ದಾರೆ, ಒಂದು ವಾರದ ಬಳಿಕ ಕ್ಷೇತ್ರದ ವಾತಾವರಣ ತಿಳಿಯುತ್ತದೆ ಎಂದರು.. ಇನ್ನು ಬಿಎಸ್ವೈ ಆಪ್ತ ಕಾಪು ಸಿದ್ದಲಿಂಗಸ್ವಾಮಿ ನನ್ನ ಸಹೋದರ ಇದ್ದ ಹಾಗೆ, ಸಿದ್ದಲಿಂಗಸ್ವಾಮಿಗೆ ಕೆಲವು ಜವಾಬ್ದಾರಿ ನೀಡಿದ್ದೇನೆ ಎಂದರು.. ಇನ್ನು ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಕಾಂಗ್ರೆಸ್ ಸೇರ್ಪಡೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಲಕ್ಷ್ಮಣ್ ಸವದಿಗೆ ಗುಡ್ ಲಕ್ ಎಂದರು.
geetha
Publish Date: Fri, 14 Apr 2023 (16:10 IST)
Updated Date: Fri, 14 Apr 2023 (15:58 IST)