Select Your Language

Notifications

webdunia
webdunia
webdunia
webdunia

ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ ಅನುಮತಿ: ಸೆ.12ಕ್ಕೆ ವಿಚಾರಣೆ ಮುಂದೂಡಿಕೆ

Siddaramaiah

Sampriya

ಬೆಂಗಳೂರು , ಸೋಮವಾರ, 9 ಸೆಪ್ಟಂಬರ್ 2024 (18:21 IST)
ಬೆಂಗಳೂರು: ಮುಡಾ ಹಗರಣ ಸಂಬಂಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಅನುಮತಿ ನೀಡಿದ್ದಕ್ಕೆ ತಡೆಯಾಜ್ಞೆ ಕೋರಿ ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಿಚಾರಣೆಯ ವಾದ- ಪ್ರತಿವಾದ ಆಲಿಸಿದ ಹೈಕೋರ್ಟ್‌ ಸೆ.12ಕ್ಕೆ ಮುಂದೂಡಿದ್ದಾರೆ.

ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 12ರಂದು ನಿಗದಿ ಮಾಡಲಾಗಿದ್ದು, ಅಲ್ಲಿಯವರೆಗೂ ಸಿದ್ದರಾಮಯ್ಯಗೆ ಮತ್ತೆ ರಿಲೀಫ್ ಸಿಕ್ಕಂತಾಗಿದೆ.

ನ್ಯಾಯಾಧೀಶರಾದ ಎಂ. ನಾಗಪ್ರಸನ್ನ ಅವರನ್ನೊಳಗೊಂಡ ನ್ಯಾಯಪೀಠ ಈ ಅರ್ಜಿ ವಿಚಾರಣೆ ನಡೆಸುತ್ತಿದ್ದು, ಇಂದು ಸಹ ಸುಧೀರ್ಘ ವಿಚಾರಣೆ ನಡೆಯಿತು.

ಸೆ.9ರಂದು ಸರ್ಕಾರದ ಪರ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ವಾದ ಮಂಡಿಸಿದರು. 17A ಅಡಿ ಪ್ರಾಸಿಕ್ಯೂಷನ್‌ಗೆ ಪೊಲೀಸರು ಅನುಮತಿ ಕೇಳಬಹುದು. ಅದಕ್ಕೂ ಮೊದಲು ತನಿಖಾಧಿಕಾರಿ ಪ್ರಾಥಮಿಕ ತನಿಖೆ ನಡೆಸಬೇಕು. ಪ್ರಾಥಮಿಕ ತನಿಖೆಯ ವಿವರವನ್ನು ಸಕ್ಷಮ ಪ್ರಾಧಿಕಾರಕ್ಕೆ ನೀಡಬೇಕು ಎಂದು ಲಲಿತಾ ಕುಮಾರಿ ಪ್ರಕರಣವನ್ನು ಉಲ್ಲೇಖಿಸಿದ್ದರು.

ರಾಜ್ಯಪಾಲರು ತನಿಖಾಧಿಕಾರಿಯಿಂದ ವರದಿ ಪಡೆಯಬೇಕಿತ್ತು. ಸರ್ಕಾರಕ್ಕೆ ಶೋಕಾಸ್ ನೋಟಿಸ್ ನೀಡುವ ಬದಲು ವರದಿ ಪಡೆಯಬೇಕಿತ್ತು. ವರದಿಯ ಬಲವಿಲ್ಲದೇ ರಾಜ್ಯಪಾಲರು ಅನುಮತಿ ನೀಡಿದ್ದಾರೆ ಎಂದು ಕೇಂದ್ರ ಸರ್ಕಾರದ 17ಎ ಮಾರ್ಗಸೂಚಿ ಆಧರಿಸಿ ಅಡ್ವೊಕೆಟ್ ಜನರಲ್ ವಾದ ಮಂಡಿಸಿದರು.

ನಂತರ ಸಿಎಂ ಸಿದ್ದರಾಮಯ್ಯ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು, ತಾವು ಸೆಪ್ಟೆಂಬರ್ 12ರಂದು ವಾದಿಸುವುದಾಗಿ ಕೋರ್ಟ್​ಗೆ ಮನವಿ ಮಾಡಿದರು. ಹೀಗಾಗಿ ಕೋರ್ಟ್ ವಿಚಾರಣೆಯನ್ನು ಸೆಪ್ಟೆಂಬರ್ 12ಕ್ಕೆ ಮುಂದೂಡಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಿದ್ದರಾಮಯ್ಯಗೆ ಆಗುತ್ತಿರುವ ಮೋಸದ ಬಗ್ಗೆ ಮಾತನಾಡಿದ ಆರ್‌.ಅಶೋಕ್