Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಹೈಟೆಕ್ ವೇಶ್ಯಾವಾಟಿಕೆ ನಡೆಯುತ್ತಿದೆ ಎನ್ನುವ ಮಾಹಿತಿ ಪಡೆದ ಪೊಲೀಸರು ಏಕಾಏಕೀ ವೇಶ್ಯಾವಾಟಿಕೆಯ ಮನೆಯ ಮೇಲೆ ದಾಳಿ ಮಾಡಿದಾಗ ಬಿಜೆಪಿ ಮುಖಂಡ ಸಿಕ್ಕು ಬಿದ್ದು ಪೊಲೀಸರ ಅತಿಥಿಯಾಗಿದ್ದಾನೆ ಎಂದು ಮೂಲಗಳು ತಿಳಿಸಿವೆ.
ಸಿಂಧನೂರು ಪಟ್ಟಣದಲ್ಲಿರುವ ಆದರ್ಶ ಕಾಲೋನಿಯಲ್ಲಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂದು ಜನರು ಪೊಲೀಸರಿಗೆ ದೂರು ನೀಡಿದ್ದರು. ದೂರಿನನ್ವಯ ಪೊಲೀಸರು ದಾಳಿ ನಡೆಸಿದಾಗ ತಾಲೂಕು ಬಿಜೆಪಿ ಎಸ್‌ಸಿ ಘಟಕದ ಅಧ್ಯಕ್ಷ ಹುಸೇನಪ್ಪ ಶ್ರೀಪುರಂ ಬಂಧಿತನಾಗಿದ್ದಾನೆ.
ವೇಶ್ಯಾವಾಟಿಕೆಯನ್ನು ಬಿಜೆಪಿ ಮುಖಂಡನೇ ನಡೆಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿ ಹುಸೇನಪ್ಪ ಸೇರಿದಂತೆ ಇಬ್ಬರು ಮಹಿಳೆಯರನ್ನು ರಕ್ಷಿಸಲಾಗಿದೆ. ಆರೋಪಿ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.