Webdunia - Bharat's app for daily news and videos

Install App

ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ: ಸಚಿವರ ಆಪ್ತ ಕಾರ್ಯದರ್ಶಿ ಅರೆಸ್ಟ್

Webdunia
ಶನಿವಾರ, 8 ಅಕ್ಟೋಬರ್ 2016 (17:18 IST)
ಬೆಂಗಳೂರಿನಲ್ಲಿ ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ನಡೆಸಿದ ಸಿಸಿಬಿ ಪೊಲೀಸರು, ಸಚಿವರ ಆಪ್ತ ಕಾರ್ಯದರ್ಶಿ ಸೇರಿದಂತೆ 11 ಆರೋಪಿಗಳನ್ನು ಬಂಧಿಸಿದ್ದಾರೆ. 

ಬೆಂಗಳೂರಿನ ಬಾಣಸವಾಡಿ ಪ್ರದೇಶದಲ್ಲಿ ವೇಶ್ಯಾವಾಟಿಕೆ ದಂದೆ ನಡೆಸುತ್ತಿದ್ದಾರೆ ಎನ್ನುವ ಖಚಿತ ಮಾಹಿತಿ ಮೇಲೆ ದಾಳಿ ಮಾಡಿದ ಸಿಸಿಬಿ ಪೊಲೀಸರು, ತಮಿಳುನಾಡಿನ ಸಚಿವರೊಬ್ಬರ ಆಪ್ತ ಕಾರ್ಯದರ್ಶಿ ಸೇರಿದಂತೆ 11 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಬಂಧಿತರ ವಿಚಾರಣೆ ನಡೆಸಿದ್ದಾರೆ.
 
ಈ ಸಂಬಂಧ ಬಾಣಸವಾಡಿ ವ್ಯಾಪ್ತಿಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕೆಲವು ಯುವತಿಯರನ್ನು ರಕ್ಷಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
 
ಕಳೆದ ಕೆಲವು ದಿನಗಳಿಂದ ವೇಶ್ಯಾವಾಟಿಕೆ ನಡೆಯುತ್ತಿದೆ ಎನ್ನುವ ಮಾಹಿತಿಗಳು ಲಭ್ಯವಾಗಿದ್ದವು. ಇಂದು ಖಚಿತ ಮಾಹಿತಿ ಪಡೆದು ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ ಮಾಡಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments