Publish Date: Mon, 25 Sep 2023 (15:00 IST)
Updated Date: Mon, 25 Sep 2023 (17:02 IST)
ಕಾವೇರಿಗಾಗಿ ಕನ್ನಡಪರ ಸಂಘಟನೆಗಳ ಹೋರಾಟ ಮುಂದುವರೆದಿದೆ. ಕನ್ನಡಿಗರ ರಕ್ಷಣಾ ವೇದಿಕೆಯಿಂದ ಮೈಸೂರು ರಸ್ತೆಯ ಬಾಪೂಜಿ ನಗರದ ಸಂಗೊಳ್ಳಿ ರಾಯಣ್ಣ ಹೆಬ್ಬಾಗಿಲ ಬಳಿ ರಸ್ತೆ ತಡೆದು ಕನ್ನಡ ಸಂಘಟನೆಗಳ ಆಕ್ರೋಶ ವ್ಯಕ್ತಪಡಿಸಿದ್ರು. ಕನ್ನಡಿಗರ ರಕ್ಷಣಾ ವೇದಿಕೆ ಕಾರ್ಯಕರ್ತರು ರಸ್ತೆ ತಡೆದು ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ರು. ಇನ್ನು ರಸ್ತೆ ತಡೆ ನಡೆಸಿದ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ರು. ಈ ವೇಳೆ ತಳ್ಳಾಟ ನೂಕಾಟ ಕೂಡ ನಡೀತು.