Publish Date: Fri, 27 Jul 2018 (13:58 IST)
Updated Date: Fri, 27 Jul 2018 (14:01 IST)
ಮೈಮೇಲೆ ಮಲ ಸುರಿದುಕೊಂಡು ಪ್ರತಿಭಟನೆ ಮಾಡುತ್ತಿರುವವರನ್ನು ಪೊಲೀಸರು ಬಂಧಿಸಿದ್ದಾರೆ. 200ಕ್ಕೂ ಹೆಚ್ಚು ಜನ ಕಾರ್ಮಿಕರು ಬಂಧನಕ್ಕೆ ಒಳಗಾಗಿದ್ದಾರೆ. ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಆವರಣದಲ್ಲಯೇ ಮಲ ಸುರಿದುಕೊಂಡು ಪ್ರತಿಭಟನೆ ಮಾಡಿದ ಹಿನ್ನೆಲೆ ಪ್ರತಿಭಟನಾ ನಿರತರ ಬಂಧನವಾಗಿದೆ.
ಸುಮಾರು 200ಜನ ಪೌರ ಕಾರ್ಮಿಕರನ್ನ ಬಂಧಿಸಲಾಗಿದೆ. ನೇರ ವೇತನ ಹಾಗೂ ವಿವಿಧ ಬೇಡಿಕೆಗೆ ಆಗ್ರಿಹಿಸಿ ಪ್ರತಿಭಟನೆ ನಡೆದಿತ್ತು. ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡ ಬೆನ್ನಲ್ಲೇ ಪಾಲಿಕೆಯ ಗುತ್ತಿಗೆ ಕಾರ್ಮಿಕರು ಮೈಮೇಲೆ ಮಲ ಸುರಿದುಕೊಂಡು ಆಕ್ರೋಶ ವ್ಯಕ್ತಪಡಿಸಿದ್ದರು.
ಕಳೆದ ನಾಲ್ಕು ತಿಂಗಳಿಂದ ವೇತನ ನೀಡದ ಮಹಾನಗರ ಪಾಲಿಕೆ ಕ್ರಮ ಖಂಡಿಸಿ ಕಾರ್ಮಿಕರು ಹೋರಾಟ ಶುರುಮಾಡಿದ್ದಾರೆ.