Publish Date: Mon, 21 Dec 2020 (12:03 IST)
Updated Date: Mon, 21 Dec 2020 (12:04 IST)
ಕೊಡಗು : ಕೊಡವರು ಗೋಮಾಂಸ ಸೇವಿಸುತ್ತಾರೆಂಬ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿಕೆ ವಿರುದ್ಧ ಕೊಡವ ಸಮುದಾಯದವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಿದ್ಧರಾಮಯ್ಯ ಹೇಳಿಕೆಯನ್ನು ಖಂಡಿಸಿ ಕೊಡವ ಸಮುದಾಯದವರು ಪ್ರತಿಭಟನೆ ನಡೆಸುತ್ತಿದ್ದಾರೆ. ಕೊಡಗು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸುತ್ತಿದ್ದಾರೆ. ಸಿದ್ದರಾಮಯ್ಯ ಬಹಿರಂಗವಾಗಿ ಕ್ಷಮೆ ಕೇಳಬೇಕು ಎಂದು ಧರಣಿ ನಿರತ ಕೊಡವ ಸಮುದಾಯದವರು ಆಗ್ರಹಿಸಿದ್ದಾರೆ.