ಮಂಗಳೂರು : ತಣ್ಣಾಗಾಗಿದ್ದ ಹಿಜಬ್ ವಿವಾದ ಮಂಗಳೂರು ಕಾಲೇಜಿನಲ್ಲಿ ಮತ್ತೆ ಪ್ರಾರಂಭವಾಗಿದೆ.
ಮಂಗಳೂರಿನ ಹಂಪನಕಟ್ಟೆಯಲ್ಲಿರುವ ವಿಶ್ವವಿದ್ಯಾಲಯ ಕಾಲೇಜಿನಲ್ಲಿ ವಿದ್ಯಾರ್ಥಿನಿಯರು ಹಿಜಬ್ ಧರಿಸಿ ಬಂದಿದ್ದರು. ಈ ಹಿನ್ನೆಲೆ ಕೆಲ ವಿದ್ಯಾರ್ಥಿಗಳು ನಾವು ಇನ್ಮುಂದೆ ಕೇಸರಿ ಶಾಲು ಧರಿಸಿ ಬರುತ್ತೇವೆ ಎಂದು ಪ್ರತಿಭಟನೆ ಪ್ರಾರಂಭವಾಗಿದೆ. ವಿದ್ಯಾರ್ಥಿಗಳು ಕ್ಲಾಸ್ ಬಹಿಷ್ಕರಿಸಿ, ಎಬಿವಿಪಿ ನೇತೃತ್ವದಲ್ಲಿ ಕ್ಯಾಂಪಸ್ ಬಳಿ ಪ್ರತಿಭಟನೆ ಮಾಡಿದರು.
ಇತ್ತೀಚೆಗೆ ಕಾಲೇಜು ಆಡಳಿತ ಮಂಡಳಿ ಮೀಟಿಂಗ್ನಲ್ಲಿ ಹಿಜಬ್ ಮತ್ತು ಕೇಸರಿ ಶಾಲು ಹಾಕಬಾರದು ಎಂದು ನಿರ್ಧಾರ ಮಾಡಲಾಗಿದೆ. ಆದರೂ ವಿದ್ಯಾರ್ಥಿನಿಯರು ಹಿಜಬ್ ಹಾಕಿಕೊಂಡು ಬಂದಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇದಕ್ಕೆ ಕಾಲೇಜು ಪ್ರಾಂಶುಪಾಲರು ಮತ್ತು ಕೆಲ ಶಿಕ್ಷಕರ ಕಾರಣವಾಗಿದ್ದು, ಅವರ ವಿರುದ್ಧ ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿದ್ದಾರೆ. ಕಾಲೇಜು ವಿದ್ಯಾರ್ಥಿ ಸಂಘದ ನಾಯಕನ ಬದಲಾವಣೆಗೂ ಸಹ ಮನವಿ ಮಾಡಿದರು.