Select Your Language

Notifications

webdunia
webdunia
webdunia
मंगलवार, 15 अक्टूबर 2024
webdunia

ಸರ್ಕಾರಿ ನೌಕರರೆಂದು ಪರಿಗಣಿಸುವಂತೆ ಒತ್ತಾಯಿಸಿ ಸಾರಿಗೆ ನೌಕರರಿಂದ ಪ್ರತಿಭಟನೆ

ಸರ್ಕಾರಿ ನೌಕರರೆಂದು ಪರಿಗಣಿಸುವಂತೆ ಒತ್ತಾಯಿಸಿ ಸಾರಿಗೆ ನೌಕರರಿಂದ ಪ್ರತಿಭಟನೆ
ಬೆಂಗಳೂರು , ಸೋಮವಾರ, 27 ಜನವರಿ 2020 (10:11 IST)
ಬೆಂಗಳೂರು : ಸರ್ಕಾರಿ ನೌಕರರೆಂದು ಪರಿಗಣಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರು ಪ್ರತಿಭಟನೆ ನಡೆಸುತ್ತಿದ್ದಾರೆ.

ಇಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯ ತನಕ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಂದ ನೌಕರರು ಮತ್ತು ಅವರ ಕುಟುಂಬ ಸದಸ್ಯರು ಬರುತ್ತಿದ್ದು, ತಮ್ಮನ್ನು ಸರ್ಕಾರಿ ನೌಕರರನ್ನಾಗಿ ಮಾಡುವಂತೆ ಆಗ್ರಹಿಸಿದ್ದಾರೆ.

ಆದರೆ ಇಂದು  ಸಂಚಾರದಲ್ಲಿ ವ್ಯತ್ಯಯವಾಗಿ ಸಾರ್ವಜನಿಕರಿಗೆ ತೊಂದರೆ ಆಗದ ರೀತಿಯಲ್ಲಿ ಪ್ರತಿಭಟನೆ ಮಾಡಲು  ಬಿಎಂಟಿಸಿ ಸಿಬ್ಬಂದಿ ತೀರ್ಮಾನಿಸಿದ್ದರಿಂದ  ಸಂಚಾರದಲ್ಲಿ ಯಾವುದೇ ವ್ಯತ್ಯಯ ಕಂಡುಬಂದಿಲ್ಲ ಎನ್ನಲಾಗಿದೆ.

 


Share this Story:

Follow Webdunia kannada

ಮುಂದಿನ ಸುದ್ದಿ

ಆರೋಗ್ಯದಲ್ಲಿ ಏರುಪೇರಾದ ಹಿನ್ನಲೆ; ಸಚಿವ ಸಿಸಿ ಪಾಟೀಲ್ ಆಸ್ಪತ್ರೆಗೆ ದಾಖಲು