ವೇತನ ಹೆಚ್ಚಳಕ್ಕಾಗಿ ಪ್ರೊಟೆಸ್ಟ್

Webdunia
ಭಾನುವಾರ, 17 ಸೆಪ್ಟಂಬರ್ 2023 (18:42 IST)
ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು‌ ಬೀದರ್​ ನಗರದಲ್ಲಿ ಪ್ರತಿಭಟನೆ ನಡೆಸಿದರು. ಬೀದರ್​ನ ಅಂಬೇಡ್ಕರ್ ವೃತ್ತದ ಬಳಿ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ದ ಆಕ್ರೋಶ ಹೊರಹಾಕಿದರು. ಈ ಹಿಂದೆ ಚುನಾವಣೆ ಸಮಯದಲ್ಲಿ ಪ್ರಿಯಾಂಕಾ ಗಾಂಧಿಯವರು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ವೇತನ ಹೆಚ್ಚಿಸುವ ಭರವಸೆ ನೀಡಿದ್ರು. 6ನೇ ಗ್ಯಾರಂಟಿಯಾಗಿ ಅಂಗನವಾಡಿ ಕಾರ್ಯಕರ್ತೆಯರಿಗೆ 15 ಸಾವಿರ ಹಾಗೂ ಸಹಾಯಕರಿಯರಿಗೆ 10 ಸಾವಿರ ನೀಡುವ ಭರವಸೆ ನೀಡಿದ್ರು. ಆದರೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದು 100 ದಿನ ಕಳೆಯುತ್ತಾ ಬಂದ್ರು ಅಂಗನವಾಡಿ ಕಾರ್ಯಕರ್ತೆಯರ ಬಗ್ಗೆ ಗಮನ ಹರಿಸುತ್ತಿಲ್ಲ. ವೇತನ ಕಡಿಮೆ ಇರುವುದರಿಂದ ಅಂಗನವಾಡಿ ಕಾರ್ಯಕರ್ತೆಯರು ಸಾಕಷ್ಟು ಸಮಸ್ಯೆ ಎದುರಿಸುತ್ತಿದ್ದು, ಸರ್ಕಾರ ತಾವು ನೀಡಿದ ಭರವಸೆ ಜೊತೆಗೆ ನಿವೃತ್ತಿ ಸಮಯದಲ್ಲಿ 3 ಲಕ್ಷ ಇಡಗಂಟು ನೀಡಬೇಕು ಎಂದು ಒತ್ತಾಯಿಸಿದರು. ಸರ್ಕಾರ ಶೀಘ್ರವಾಗಿ ಅಂಗನವಾಡಿ ಕಾರ್ಯಕರ್ತೆಯರ ಸಮಸ್ಯೆ ಆಲಿಸಿ ವೇತನ ಹೆಚ್ವಿಸುವ ಮೂಲಕ ಆಸರೆ ಆಗಬೇಕು‌ ಇಲ್ಲವಾದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಬ್ಬಾ.. ಒಡತಿಗೆ ಸಾವು ಬಂದೆರಗುತ್ತದೆ ಎಂದು ಮೊದಲೇ ಊಹಿಸಿದ ಸಾಕು ನಾಯಿ ಮಾಡಿದ್ದೇನು ನೋಡಿ Video

ಇರಾನ್ ಜೊತೆ ಪಾಕಿಸ್ತಾನದಲ್ಲಿ ನಡೆದ ಮಾತುಕತೆ ಫೇಲ್ ಆಗಿದ್ದು ಇದೇ ಕಾರಣಕ್ಕೆ

ಇಂಥಾ ಕ್ರೌರ್ಯ ಮೆರೆಯಲು ಆ ನಾಯಿ ಏನು ಮಾಡಿತ್ತು Video

Karnataka Weather: ಈ ಜಿಲ್ಲೆಗಳಲ್ಲಿ ಇಂದು ದಾಖಲೆಯ ಮಟ್ಟಕ್ಕೆ ಏರಲಿದೆ ತಾಪಮಾನ

ಇದೇ 15ರಂದು ಮೋದಿ ಕರ್ನಾಟಕಕ್ಕೆ ಭೇಟಿ, ಯಾವ ಕಾರಣಕ್ಕೆ ಗೊತ್ತಾ

ಮುಂದಿನ ಸುದ್ದಿ
Show comments