ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಖಾತೆ ಸಚಿವ ತನ್ವೀರ್ ಸೇಠ್ ಅಶ್ಲೀಲ ಚಿತ್ರಗಳ ವೀಕ್ಷಣೆ ಸುದ್ದಿ ಬಹಿರಂಗವಾಗುತ್ತಿದ್ದಂತೆ ಧಾರವಾಡದಲ್ಲಿ ಕರವೇ ಸ್ವಾಭಿಮಾನ ಬಣದಿಂದ ಸಚಿವ ತನ್ವೀರ್ ಸೇಠ್ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡಲೇ ಸಚಿವ ತನ್ವೀರ್ ಸೇಠ್ ರಾಜೀನಾಮೆ ಪಡೆಯಬೇಕು. ಇಲ್ಲವಾದಲ್ಲಿ ರಾಜ್ಯಾದ್ಯಂತ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಸರಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಶಿಕ್ಷಣ ಖಾತೆ ಸಚಿವರಾಗಿ ಅಶ್ಲೀಲ ಚಿತ್ರ ವೀಕ್ಷಣೆ ಮಾಡಿರುವುದು ಘೋರ ಅಪರಾಧವಾಗಿದೆ. ಇಂತಹ ಕೃತ್ಯ ಎಸಗಿದ ನಂತರ ಸಚಿವರು ಒಂದು ಕ್ಷಣ ಕೂಡಾ ಸಚಿವ ಸ್ಥಾನದಲ್ಲಿ ಮುಂದುವರಿಯುವ ನೈತಿಕ ಹಕ್ಕಿಲ್ಲ ಎಂದು ಪ್ರತಿಭಟನಾಕಾರರು ಕಿಡಿಕಾರಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಮಾತನಾಡಿ, ಮುಖ್ಯಮಂತ್ರಿಗಳು ಕೂಡಲೇ ಸಚಿವ ತನ್ವೀರ್ ಸೇಠ್ ರಾಜೀನಾಮೆ ಪಡೆಯಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ಸರಕಾರವನ್ನು ಎಚ್ಚರಿಸಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ