Publish Date: Tue, 14 May 2019 (12:48 IST)
Updated Date: Tue, 14 May 2019 (12:58 IST)
ಕೃಷ್ಣಾ ನದಿಗೆ ನೀರು ಹರಿಸಲು ಆಗ್ರಹಿಸಿ ಪ್ರತಿಭಟನೆ ತೀವ್ರಗೊಂಡಿದೆ.
ಬೆಳಗಾವಿ ಜಿಲ್ಲೆಯ ಅಥಣಿ ಪಟ್ಟಣದ ತಹಶೀಲ್ದಾರ ಕಚೇರಿ ಎದುರು ರೈತರು ಪ್ರತಿಭಟನೆ ನಡೆಸಿದ್ದಾರೆ.
ಭಾರತೀಯ ಕೃಷಿಕ ಸಂಘ, ಕಿಸಾನ್ ಸಂಘ, ರೈತ ಸಂಘ ಮತ್ತು ಹಸಿರು ಸೇನೆಯಿಂದ ಪ್ರತಿಭಟನೆ ನಡೆಸಲಾಯಿತು.
ಕಳೆದ ಎರಡು ತಿಂಗಳಿಂದ ಬತ್ತಿದ ಕೃಷ್ಣಾ ನದಿಗೆ ನೀರು ಹರಿಸುವಲ್ಲಿ ಸರ್ಕಾರ ವಿಫಲವಾಗಿದೆ. ಹೀಗಂತ ಆರೋಪಿಸಿ ರೈತರು ಪ್ರತಿಭಟನೆ ನಡೆಸಿದ್ದಾರೆ.
ರಾಜ್ಯ ಸರಕಾರ ಈ ಕೂಡಲೇ ಮಹಾರಾಷ್ಟ್ರ ಸರಕಾರದ ಮೇಲೆ ಒತ್ತಡ ಹಾಕಿ ನೀರನ್ನು ಬಿಡಿಸಬೇಕೆಂದು ಪ್ರತಿಭಟನಾಕಾರರು ಆಗ್ರಹ ಮಾಡಿದ್ದಾರೆ.