Publish Date: Sat, 27 Jul 2019 (19:20 IST)
Updated Date: Sat, 27 Jul 2019 (19:22 IST)
ರಸ್ತೆ ಮೇಲೆ ಶವ ಇಟ್ಟು ಪ್ರತಿಭಟನೆ ನಡೆಸಿ, ಮೃತನ ಕುಟುಂಬಕ್ಕೆ ಪರಿಹಾರ ನೀಡಬೇಕೆಂದು ಆಗ್ರಹಿಸಿದ ಘಟನೆ ನಡೆದಿದೆ.
ರಸ್ತೆ ಅಪಘಾತದಲ್ಲಿ ಕಲಬುರಗಿ ಪಂಚಶೀಲ ನಗರದ ಕಣರಪ್ಪ ಎಂಬುವರು ಸಾವನ್ನಪ್ಪಿದ್ದರು. ಅಪಘಾತ ಮಾಡಿದ ವಾಹನ ಚಾಲಕ ನಿಲ್ಲಿಸದೇ ಪರಾರಿಯಾಗಿದ್ದ. ಘಟನೆ ಖಂಡಿಸಿ ಹಾಗೂ ಮೃತನ ಕುಟುಂಬಕ್ಕೆ ಪರಿಹಾರ ಕೊಡಬೇಕೆಂದು ಆಗ್ರಹಿಸಿ ಬಡಾವಣ ನಿವಾಸಿಗಳು ಹಳೇ ಜೇವರ್ಗಿ ಮುಖ್ಯರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದ್ರು.
ಅಪಘಾತ ಪ್ರಕರಣಗಳು ಹೆಚ್ಚಾಗುತ್ತಿದ್ದು, ರಸ್ತೆ ತಡೆ ನಿರ್ಮಾಣವಾಗಬೇಕೆಂದು ಪ್ರತಿಭಟನಾಕಾರರು ಒತ್ತಾಯ ಮಾಡಿದ್ರು.
ಸ್ಥಳೀಯರ ಹೋರಾಟಕ್ಕೆ ನಗರಸಭೆ ಸದಸ್ಯ ಸಾಥ್ ನೀಡಿದ್ರು. ಇನ್ನು ಘಟನಾಸ್ಥಳಕ್ಕೆ ಆಗಮಿಸಿದ ಪೊಲೀಸ್ ಸಿಬ್ಬಂದಿ ಸೂಕ್ತ ಕ್ರಮ ಕೈಗೊಳ್ಳೋದಾಗಿ ಭರವಸೆ ನೀಡಿದ್ರು.