Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ದಲಿತ ಯುವಕನಿಗೆ ಮೂತ್ರ ಕುಡಿಸಿದ ಪಿಎಸ್ ಐ ಅ
ರ್ಜುನ್ ಗೆ 14 ದಿನ ನ್ಯಾಯಂಗ ಬಂಧನ ವಿಧಿಸಲಾಗಿದೆ.
ಚಿಕ್ಕಮಗಳೂರಿನ 1ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನ್ಯಾಯಾಧೀಶೆ ಪುಷ್ಪಾಂಜಲಿ ಗುರುವಾರ ಈ ಆದೇಶ ಹೊರಡಿಸಿದ್ದಾರೆ,
ಮೇ 10ರಂದು ಪುನೀತ್ ಮೇಲೆ ಹಲ್ಲೆ ನಡೆಸಿದ್ದ ಪಿಎಸ್ ಐ ಅರ್ಜುನ್, ಮೂತ್ರ ಕುಡಿಸಿದರು ಎಂಬ ಗಂಭೀರ ಅರೋಪ ಹೊತ್ತಿದ್ದು, ರಾಜ್ಯಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.
ಮೂಡಿಗೆರೆ ತಾಲೂಕಿನ ಗೋಣಿಬೀಡು ಪೊಲೀಸ್ ಠಾಣೆ ಪಿಎಸ್ ಐ ಅರ್ಜುನ್ ಅವರನ್ನು ನಿನ್ನೆ ಸಿಐಡಿ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.