Publish Date: Tue, 12 May 2020 (18:29 IST)
Updated Date: Tue, 12 May 2020 (18:31 IST)
ಜನತಾ ಕರ್ಫ್ಯೂ ಬಳಿಕ ಸ್ಥಗಿತಗೊಂಡಿದ್ದ ಸರಕಾರಿ ಹಾಗೂ ಖಾಸಗಿ ಬಸ್ ಸಂಚಾರ ಮತ್ತೆ ಆರಂಭಗೊಂಡಿದೆ.
ಉಡುಪಿ ಜಿಲ್ಲೆಯಲ್ಲಿ ಖಾಸಗಿ ಮತ್ತು ಸರ್ಕಾರಿ ಬಸ್ ಸಂಚಾರ ಆರಂಭವಾಗಲಿದೆ.
ಕೆಲವು ಷರತ್ತುಗಳನ್ನು ವಿಧಿಸಿ ಬಸ್ ಸಂಚಾರಕ್ಕೆ ಅನುಮತಿ ನೀಡಲಾಗಿದೆ. ಮೇ 13ರ ಬೆಳಗ್ಗೆಯಿಂದ ಜಿಲ್ಲೆಯೊಳಗೆ ಖಾಸಗಿ ಮತ್ತು ಸರ್ಕಾರಿ ಬಸ್‍ಗಳು ಸಂಚಾರ ಆರಂಭಿಸಲಿವೆ. ಒಂದು ಬಸ್‍ನಲ್ಲಿ ಶೇ.50ರಷ್ಟು ಪ್ರಯಾಣಿಕರು ಮಾತ್ರ ಓಡಾಡಬಹುದು.
ಸಾಮಾಜಿಕ ಅಂತರವನ್ನು ಕಡ್ಡಾಯವಾಗಿ ಪಾಲಿಸಲೇಬೇಕು. ಮಾಸ್ಕ್ ಧರಿಸಿದ ಪ್ರಯಾಣಿಕರನ್ನು ಬಸ್ ಒಳಗೆ ಬಿಟ್ಟುಕೊಳ್ಳಬೇಡಿ ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಬಸ್ ನಿರ್ವಾಹಕರಿಗೆ ಹಾಗೂ ಚಾಲಕರಿಗೆ ಸೂಚನೆ ನೀಡಿದ್ದಾರೆ.
ಮಾಸ್ಕ್ ತಲೆಗೆ ಹಾಕಿಕೊಳ್ಳುವುದು, ಕುತ್ತಿಗೆಗೆ ನೇತಾಡಿಸುವುದು ಮಾಡಿದಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.