Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಕನ್ನಡದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಹೃದಯಾಘಾತದಿಂದ ನಿಧನರಾಗಿದ್ದರು. ನಿಧನದ ಸುದ್ದಿ ತಿಳಿದ ನಂತರ ಅಭಿಮಾನಿಗಳು ಸಮರೋಪಾದಿಯಲ್ಲಿ ದರ್ಶನಕ್ಕೆ ಆಗಮಿಸಿದ್ದರು. ದಕ್ಷಿಣ ಭಾರತದ ಚಿತ್ರೋದ್ಯಮದ ಎಲ್ಲ ಮಂದಿ ಕಂಬನಿ ಮಿಡಿದಿದ್ದರು.ಸುಮಾರು 25 ಲಕ್ಷಕ್ಕೂ ಅಧಿಕ ಅಭಿಮಾನಿಗಳು ಪುನೀತ್ ರಾಜ್ ಕುಮಾರ್ (Puneeth Rajkumar) ಅವರ ಅಂತಿಮ ದರ್ಶನ ಪಡೆದುಕೊಂಡಿದ್ದರು. ಸವಾಲುಗಳನ್ನು ಜವಾಬ್ದಾರಿಯುತವಾಗಿ ನಿರ್ವಹಿಸಿದ ಕರ್ನಾಟಕ ಪೊಲೀಸ್ (Karnataka Police) ಇಲಾಖೆಗೆ ಧನ್ಯವಾದ ಹೇಳಲೇಬೇಕು. ಸಿಎಂ ಬಸವರಾಜ ಬೊಮ್ಮಾಯಿ, (Basavaraj Bommai) ಗೃಹ ಸಚಿವ ಆರಗ ಜ್ಞಾನೇಂದ್ರ, (Araga Jnanendra) ಡಿಜಿ/ಐಜಿಪಿ ಪ್ರತಿಯೊಬ್ಬ ಪೊಲೀಸ್ ಅಧಿಕಾರಿಗಳನ್ನು ಈ ಹಿಂದೆಯೂ ಅಭಿನಂದಿಸಿದ್ದರು.
ನಿರಂತರ 48 ಗಂಟೆ ಭದ್ರತೆ ನೀಡಿದ ಸಿಬ್ಬಂದಿ ಕಾರ್ಯಕ್ಕೆ ಜನರಿಂದಲೂ ಮೆಚ್ಚುಗೆ ವ್ಯಕ್ಯವಾಗಿತ್ತು.. ಯಾವುದೇ ಅಹಿತಕರ ಘಟನೆ ನಡೆಯದಂತೆ ಬಂದೋಬಸ್ತ್ ಮಾಡಿದ ಬೆಂಗಳೂರು ನಗರದ ಅಧಿಕಾರಿಗಳು ಹಾಗೂ ಸಿಬ್ಬಂದಿ, ಕೆಎಸ್‌ಆರ್ ಪಿ(KSRP), ಸಿಎಆರ್ ಸಿಬ್ಬಂದಿ ಕಾರ್ಯ ಮೆಚ್ಚುಗೆಗೆ ಪಾತ್ರವಾಗಿತ್ತು.