Publish Date: Friday, 30 January 2026 (17:42 IST)
Updated Date: Friday, 30 January 2026 (01:44 IST)
ಬೈ ಎಲೆಕ್ಷನ್ ಸ್ಪರ್ಧೆ ಮಾಡಿರುವ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ವಿರುದ್ಧ ನಾಮಪತ್ರ ಸಲ್ಲಿಕೆ ವೇಳೆ ಕೇಸ್ ದಾಖಲು ಮಾಡಿರುವುದಕ್ಕೆ ಕೈ ಪಡೆ ಖಂಡಿಸಿದೆ.
ಮಹಿಳೆಯ ಮೇಲೆ ಕೇಸ್ ಹಾಕಲಾಗಿದೆ. ಸಿದ್ದರಾಮಯ್ಯನವರ ಎಸ್ಕಾರ್ಟ್ ಡ್ರೈವರ್ ಮೇಲೆ ಕೇಸ್ ಹಾಕಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದ್ದು, ಕೇಸ್ ಹಾಕಿರುವ ಕ್ರಮಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ವಿಪಕ್ಷ ನಾಯಕ ಸಿದ್ದರಾಮಯ್ಯ, ಸ್ಥಳದಲ್ಲಿದ್ದ ಪೊಲೀಸರ ಮೇಲೆ ಕೇಸ್ ಹಾಕಲಿ ಎಂದು ಸವಾಲು ಎಸೆದರು.
ಇನ್ನು ಚುನಾವಣೆಯಲ್ಲಿ ನಾಮಪತ್ರ ಸಲ್ಲಿಸೋಕೆ ಬಂದ ಅಭ್ಯರ್ಥಿಯೇ ಮೇಲೆ ಕೇಸ್ ಹಾಕುವ ಮೂಲಕ ಕೀಳುಮಟ್ಟದ ರಾಜಕಾರಣ ಮಾಡುತ್ತಿದೆ ಎಂದು ಬಿಜೆಪಿ ವಿರುದ್ಧ ಹರಿಹಾಯ್ದರು.